Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೆಲಮೂಲದ ಚಿಂತನೆಗಳು ದ್ರಾವಿಡ ಅಸ್ಮಿತೆಯ ಪ್ರತೀಕ--ಅಭಿಗೌಡ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕನ್ನಡಿಗರೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಜನರು ದ್ರಾವಿಡ ಅಸ್ಮಿತೆಯ ಪ್ರತೀಕವಾಗಿದ್ದು
, ನೆಲಮೂಲದ ಚಿಂತನೆಗಳ ಮೂಲಕ ನಾಡಿನ ಅನನ್ಯತೆಯನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ನಾವು ದ್ರಾವಿಡ ಕನ್ನಡಿಗರು ಚಳವಳಿಯ ಸಂಸ್ಥಾಪಕ ಅಭಿಗೌಡ ಅಭಿಪ್ರಾಯಪಟ್ಟರು.

ಇಲ್ಲಿನ ಶ್ರೀ ದೇವರಾಜ್‌ಅರಸ್‌ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಸೋಮವಾರ ಭಾಗ್ಯವಿಧಾತ ಕ್ರೆಡಿಟ್‌ಸೌಹಾರ್ದ ಸಹಕಾರಿ ನಿಯಮಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕನ್ನಡ ಉಪನ್ಯಾಸ ಮಾಲಿಕೆಯಲ್ಲಿ "ದ್ರಾವಿಡ ನುಡಿ ಕುಟುಂಬ ಮತ್ತು ಕನ್ನಡ ನುಡಿ" ವಿಚಾರದ ಕುರಿತು ಉಪನ್ಯಾಸ ನೀಡಿದರು.

ಮಾತೃಪ್ರಧಾನ ವ್ಯವಸ್ಥೆಯನ್ನು ಪ್ರತಿಪಾದಿಸುವ ದ್ರಾವಿಡ ಪರಂಪರೆಯೇ ಭಾರತದ ಸಾಂಸ್ಕೃತಿಕ ಇತಿಹಾಸದ ಅಡಿಪಾಯವಾಗಿದೆ. ಇಂದು ಒಂದು ದೇಶ ಒಂದು ಭಾಷೆ, ಒಂದು ಸಂಸ್ಕೃತಿ, ಒಂದು ಚಿಂತನೆ ಹೆಸರಿನಲ್ಲಿ ಈ ನಾಡಿನ ವೈವಿಧ್ಯತೆಯನ್ನು ನಾಶ ಮಾಡುವ ಪ್ರಯತ್ನಗಳು ನಡೆಯುತ್ತಿರುವುದು ಅಪಾಯಕಾರಿ. ಬಹುತ್ವವನ್ನು ಪ್ರತಿಪಾದಿಸುವುದೇ ಭಾರತ ಒಕ್ಕೂಟದ ಮಂತ್ರವಾಗಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಭಾಗ್ಯವಿಧಾತ ಕ್ರೆಡಿಟ್‌ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಪ್ರೊ.ಚಂದ್ರಪ್ಪ ಮಾತನಾಡಿ, ಕನ್ನಡ ನಾಡು, ನುಡಿಯ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಜಾಗೃತಗೊಳಿಸುವ ಉದ್ದೇಶದಿಂದ ಕಾಲೇಜು ಹಂತದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಸಾಹಿತ್ಯ, ಸಾಂಸ್ಕೃತಿಕ ಮೌಲ್ಯಗಳ ಬಗ್ಗೆ ಅವಲೋಕಿಸುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ಪ್ರಾಂಶುಪಾಲ ಡಾ.ಆರ್.ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಂ.ಚಿಕ್ಕಣ್ಣ ಮಾತನಾಡಿದರು. ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಭಾಗ್ಯವಿಧಾತ ಕ್ರೆಡಿಟ್‌ಸೌಹಾರ್ದ ಸಹಕಾರಿ ನಿಯಮಿತದ ಉಪಾಧ್ಯಕ್ಷ ದೊಡ್ಡರಂಗಪ್ಪ, ನಿವೃತ್ತ ಉಪನ್ಯಾಸಕ ಮಂಜುನಾಥಯ್ಯ, ವಿಭಾಗಗಳ ಮುಖ್ಯಸ್ಥರಾದ ಪಿ.ಚೈತ್ರ, ಸಿ.ಪಿ.ಪ್ರಕಾಶ್‌, ಡಾ.ತಾವರೆನಾಯ್ಕ್‌, ಉದ್ಯೋಗಾಧಿಕಾರಿ ಬಾಬು ಸಾಬಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್, ಉಪನ್ಯಾಸರಾದ ಅಭಿಷೇಕ್, ಉಷಾಶ್ರೀ ಮತ್ತಿತರರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ