Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ 66 ಕೆವಿ ವಿದ್ಯುತ್ ಮಾರ್ಗ ಚಾಲನೆ: ಸಾರ್ವಜನಿಕರಿಗೆ ಎಚ್ಚರಿಕೆ

Advertisement
 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ  ವತಿಯಿಂದ ಹೊಸದಾಗಿ ನಿರ್ಮಿಸಲಾದ 66/11 ಕೆವಿ ತೇಕಲವಟ್ಟಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗವು ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ. ಚಿತ್ರದುರ್ಗ-ಹಿರಿಯೂರು ಮಾರ್ಗದಿಂದ ಸುಮಾರು 14.132 ಕಿ.ಮೀ ಉದ್ದದ ಈ 66 ಕೆವಿ ಜೋಡಿ ಮಾರ್ಗವು ಜನವರಿ 30
, 2026 ರಂದು ಅಥವಾ ನಂತರ ಯಾವುದೇ ಸಮಯದಲ್ಲಿ ಚಾಲನೆಗೊಳ್ಳಲಿದೆ.

ಚಾಲನೆಗೊಂಡ ವಿದ್ಯುತ್ ಮಾರ್ಗ ಹೊಳಲ್ಕೆರೆ ಮತ್ತು ಹಿರಿಯೂರು ತಾಲ್ಲೂಕಿನ ತೇಕಲವಟ್ಟಿ, ಯರೇಹಳ್ಳಿ, ಕೌಳಾಳು, ಬುರುಜನರೊಪ್ಪ, ಮರಡಿದೇವಿಗಿರೆ, ಭರಂಪುರ, ಕುಂಬಾರಘಟ್ಟ ಮತ್ತು ಯಲಕುರನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಈ ಹಾದುಹೋಗಲಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ವಿದ್ಯುತ್ ಗೋಪುರಗಳನ್ನು (ಖಿoತಿeಡಿs) ಹತ್ತುವುದು ಅಥವಾ ಮುಟ್ಟುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮಾರ್ಗದ ಮೇಲೆ ಮರದ ಕೊಂಬೆಗಳು, ಲೋಹದ ತಂತಿ ಅಥವಾ ಇತರ ಯಾವುದೇ ವಸ್ತುಗಳನ್ನು ಎಸೆಯಬಾರದು. ವಿದ್ಯುತ್ ಕಂಬಗಳಿಗೆ ಜಾನುವಾರುಗಳನ್ನು ಕಟ್ಟುವುದು ಅಪಾಯಕಾರಿ. ಮಾರ್ಗದ ಅಡಿಯಲ್ಲಿರುವ ಅಪಾಯಕಾರಿ ಮರಗಳನ್ನು ಭೂಮಾಲೀಕರು ಕೂಡಲೇ ತೆರವುಗೊಳಿಸಬೇಕು.

ಈ ಎಚ್ಚರಿಕೆಗಳನ್ನು ಉಲ್ಲಂಘಿಸಿ ನಡೆಯುವ ಯಾವುದೇ ಅನಾಹುತ ಅಥವಾ ಅಪಘಾತಗಳಿಗೆ ಕೆಪಿಟಿಸಿಎಲ್ ನಿಗಮವು ಜವಾಬ್ದಾರಿಯಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ