Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರ್ಥಪೂರ್ಣವಾಗಿ ಜರುಗಿದ ನೂತನ ರೋಟರಿ ಮಾಂಡವ್ಯ ಪದಗ್ರಹಣ ಕಾರ್ಯಕ್ರಮ

Advertisement
ಚಂದ್ರವಳ್ಳಿ ನ್ಯೂಸ್, ಮಂಡ್ಯ:
ನೂತನವಾಗಿ ಸ್ಥಾಪನೆಯಾದ ರೋಟರಿ ಮಾಂಡವ್ಯ ಪದಗ್ರಹಣ ಕಾರ್ಯಕ್ರಮವು ಮಂಡ್ಯ ನಗರದ ವಲಯದಲ್ಲಿರುವ ಲೆಮನ್ ಗ್ರಾಸ್ ಆವರಣದಲ್ಲಿ ಅರ್ಥಪೂರ್ಣವಾಗಿ ನೆರವೇರಿತು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎ.ಎನ್. ಪ್ರಕಾಶ್ ಗೌಡ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಸರ್ಕಾರ ಮತ್ತು ಜನಸಾಮಾನ್ಯರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವಲ್ಲಿ ಸೇವಾ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಮಾಜದ ನಡುವೆ ಬಾಂಧವ್ಯದ ಕೊಂಡಿಯಾಗಿ ಕಾರ್ಯನಿರ್ವಹಿಸಿ ಸೇವೆಯ ಹೆಜ್ಜೆ ಇಡಬೇಕಾದರೆ ರೋಟರಿಯಂತಹ ಸಂಸ್ಥೆಗಳು ಮುಖ್ಯ ವೇದಿಕೆಯಾಗುತ್ತವೆ ಎಂದು ತಿಳಿಸಿದರು.

ನೂತನ ಅಧ್ಯಕ್ಷರಾಗಿ ಅಶೋಕ್ ಡಿ.ಸಿ ಅವರು ಆಯ್ಕೆಯಾಗಿರುವುದು ಸಂತಸದ ವಿಷಯವೆಂದು ಹೇಳಿದ ಅವರು, ಅಶೋಕ್ ಅವರು ಬಾಲ್ಯದಿಂದಲೇ ರಾಷ್ಟ್ರೀಯ ಸೇವಾ ಯೋಜನೆ ಸೇರಿದಂತೆ ಹಲವು ಸಮಾಜಮುಖಿ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು ಎಂದು ಎಸ್ಪಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.


 ಮನುಷ್ಯ ಹುಟ್ಟಿದ್ದು ಕೇವಲ ಹೆಸರಿಗಾಗಿ ಅಲ್ಲ, ಹುಟ್ಟುಸಾವುಗಳ ನಡುವಿನ ಬದುಕಿಗೆ ಅರ್ಥ ನೀಡುವ ಕಾರ್ಯಗಳೇ ಜೀವನದ ಸಾರ್ಥಕತೆ ಎಂದು ಎಸ್ಪಿ ಪ್ರಕಾಶ್ ಗೌಡ ಅಭಿಪ್ರಾಯಪಟ್ಟರು.

ರೋಟರಿ ಜಿಲ್ಲಾ ರಾಜ್ಯಪಾಲ ಪ್ರೊ.ಡಾ. ಎಲಿಜಬೆತ್ ಚೆರಿಯನ್ ಮಾತನಾಡಿ, ರೋಟರಿ ಒಂದು ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾಗಿದ್ದು 120 ವರ್ಷಗಳ ಶ್ರೀಮಂತ ಇತಿಹಾಸ ಹೊಂದಿದೆ. ಈ ಮಹತ್ವದ ಸಂಸ್ಥೆಗೆ ನೂತನವಾಗಿ ರೋಟರಿ ಮಾಂಡವ್ಯ ಸೇರ್ಪಡೆಗೊಂಡಿರುವುದು ನಮಗೆಲ್ಲ ಹೆಮ್ಮೆಯ ವಿಷಯ. ಸಮಾಜ ಸೇವೆಯೇ ರೋಟರಿಯ ಅಸ್ತಿತ್ವ. ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ನಿರಂತರವಾಗಿ ಸೇವೆ ಸಲ್ಲಿಸುವ ಮೂಲಕ ಈ ಸಂಸ್ಥೆ ಉತ್ತಮ ಕಾರ್ಯಗಳನ್ನು ಮಾಡಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ 2026ನೇ ಸಾಲಿನ ಕ್ಯಾಲೆಂಡರ್ ಹಾಗೂ ರೋಟರಿ ಧ್ವಜವನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು.
ಸಮಾಜ ಸೇವಾ ಕ್ಷೇತ್ರದಲ್ಲಿ ರೊ ಶ್ರೀನಿವಾಸ ವಿ, ಪರಿಸರ ವಿಭಾಗದಲ್ಲಿ ಶಿವಕುಮಾರ್ ಎಂ
, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಚೇತನ್ ಕುಮಾರ್, ಸಾವಯವ ಕೃಷಿ ವಿಭಾಗದಲ್ಲಿ ಮಹೇಶ್ ಕುಮಾರ್, ಶಿಕ್ಷಣ ಕ್ಷೇತ್ರದಲ್ಲಿ ಶ್ರೀಮತಿ ಚಂದ್ರಕಾಂತ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಇದೇ ವೇಳೆ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕೃಷ್ಣವೇಣಿ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಗ್ರಾಮೀಣ ಭಾಗದಿಂದ ಅತಿ ಹೆಚ್ಚು ಅಂಕ ಗಳಿಸಿದ ರಕ್ಷಿತಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಡಿಸ್ಟ್ರಿಕ್ಟ್ ಮೆಂಬರ್ ಚೆರ್ಮಾನ್ ಹಾಗೂ ಡಿಜಿಎನ್ ವಿನೋದ್ ಕುಮಾರ್.ಬಿ. ಎಸ್, ಮಾಜಿ ಜಿಲ್ಲಾ ಪಾಲಕರಾದ ರೋ. ಶ್ರೀನಿವಾಸ್ ಮೂರ್ತಿ, ಜಿಲ್ಲಾ ಕಾರ್ಯದರ್ಶಿ ಹೊನ್ನೇಗೌಡ, ರಾಜೇಶ್ ತಿಪ್ಪೂರು, ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಮಂಜುನಾಥ್ ನಾಯ್ಡು, ನೂತನ ರೋಟರಿ ಮಾಂಡವ್ಯ ಅಧ್ಯಕ್ಷ ಅಶೋಕ್ ಡಿ.ಸಿ, ಕಾರ್ಯದರ್ಶಿ ಆದರ್ಶ ಎಚ್.ಆರ್, ನೂತನ ಪದಾಧಿಕಾರಿಗಳ ತಂಡ, ಸದಸ್ಯರು ಹಾಗೂ ಕುಟುಂಬ ವರ್ಗದವರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ