Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ವರ್ಷಾಚರಣೆ ಕಟ್ಟು ನಿಟ್ಟಿನ ನಿಯಮ ಜಾರಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೊಸ ವರ್ಷಾಚರಣೆ ಸಂದರ್ಭದಲ್ಲಿ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದನ್ನು ಮನವಿ ಎಂದಾದರೂ ಪರಿಗಣಿಸಿ
, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್​ ಆಗಿ ಎಚ್ಚರಿಸಿದರು.

ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 7 ದಿನ ಶೋಕಾಚರಣೆ ಘೋಷಣೆ ಮಾಡಿದ್ದು, ಸರ್ಕಾರಿ ಕಾರ್ಯಕ್ರಮ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಮಾತ್ರ ಆಚರಿಸುತ್ತಿಲ್ಲ. ಖಾಸಗಿ ಕಾರ್ಯಕ್ರಮಗಳಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಿಕೊಳ್ಳಬಹುದು ಎಂದರು.

ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲಾ ಚಟುವಟಿಕೆಗಳ ಮೇಲೆ ಕಣ್ಣಿಡಲಾಗಿದೆ. ಹೊಸ ವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯತೆಯನ್ನು ಕಾಪಾಡಬೇಕು. ವಾಣಿಜ್ಯ ಚಟುವಟಿಕೆಗಳಿಗೂ ಸಹ ನಾಳೆಯೊಳಗೆ ಮಾರ್ಗಸೂಚಿಗಳು ಬಿಡುಗಡೆಯಾಗಲಿವೆ. ಕೆಲವೊಂದಷ್ಟು ಸಡಿಲಿಕೆಗಳ ಬಗ್ಗೆಯೂ ಯೋಚಿಸಲಾಗುತ್ತಿದೆ. ಆದರೆ ಯಾವುದೇ ರೀತಿಯಲ್ಲಿಯೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ಕೆಲಸಗಳು ಆಗಬಾರದು. ಪ್ರತಿಯೊಬ್ಬರೂ ಸಹ ಕಾನೂನು ಪಾಲಿಸುವುದರ ಮೂಲಕ ಬೆಂಗಳೂರಿನ ಗೌರವ ಕಾಪಾಡಬೇಕು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ