Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಇಟಿ ಅಗ್ರ ಮೂರು ರ್‍ಯಾಂಕ್ ಪಡೆದ ಸಾಧಕರಿಗೆ ನಿಖಿಲ್ ಕುಮಾರಸ್ವಾಮಿ ಅಭಿನಂದನೆ

Advertisement
Advertisement

​ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮಾಜಿ ಶಾಸಕ ಹಾಗೂ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

​ಈ ಬಾರಿ ಬೆಂಗಳೂರಿನ ಆರ್‌ವಿ ಕಾಲೇಜಿನ ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ಪ್ರಥಮ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದರೆ, ಬೆಳ್ತಂಗಡಿಯ ಸರ್ ಎಂ.ವಿ. ಪಿಯು ಕಾಲೇಜಿನ ವಿದ್ಯಾರ್ಥಿ ಸೃಜನ್ ದ್ವಿತೀಯ ರ್‍ಯಾಂಕ್ ಹಾಗೂ ಜಯನಗರದ ಆರ್‌ವಿ ಪಿಯು ಕಾಲೇಜಿನ ವಿದ್ಯಾರ್ಥಿ ನಿನಾದ್ ವಸಿಷ್ಠ ತೃತೀಯ ರ್‍ಯಾಂಕ್ ಗಳಿಸಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

​ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ವಿದ್ಯಾರ್ಥಿಗಳಿಗೆ ಕಿವಿಮಾತು
​ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ನಿಖಿಲ್ ಕುಮಾರಸ್ವಾಮಿ ಅವರು
, ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸುವುದರ ಜೊತೆಗೆ ಪರೀಕ್ಷೆಯಲ್ಲಿ ಹಿನ್ನಡೆ ಅನುಭವಿಸಿದವರಿಗೂ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

​"ರ್‍ಯಾಂಕ್ ಸೇರಿದಂತೆ ಫಲಿತಾಂಶ ಏನೇ ಆಗಿರಲಿ, ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ. ಯಾವುದೇ ಕಾರಣಕ್ಕೂ ಆತ್ಮವಿಶ್ವಾಸ ಕಳೆದುಕೊಳ್ಳದೇ ಗಟ್ಟಿಯಾಗಿ ಮುನ್ನಡೆಯಿರಿ. ನಿಮ್ಮೆಲ್ಲರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸುತ್ತೇನೆ," ಎಂದು ಅವರು ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆ ಮೂಡಿಸಿದ್ದಾರೆ.

​ಸಿಇಟಿ ಪರೀಕ್ಷೆಯಲ್ಲಿ ಅತ್ಯುನ್ನತ ರ್‍ಯಾಂಕ್ ಪಡೆದ ಸಾಧಕರು ಹಾಗೂ ಅರ್ಹತೆ ಪಡೆದ ರಾಜ್ಯದ ಎಲ್ಲಾ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಪಯಣ ಯಶಸ್ವಿಯಾಗಲಿ ಎಂದು ನಿಖಿಲ್ ಅವರು ಹಾರೈಸಿದ್ದಾರೆ.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಗಾರದ ಅಂಗಡಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 5.76 ಲಕ್ಷ ರೂ. ಮೌಲ್ಯದ ಚಿನ್ನಾಬರಣ ವಶಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಗುರುರಕ್ಷೆ ನೀಡಿ ಗೌರವ, ಆಶೀರ್ವಾದಿಸಿದ ವೀರಶೈವ ಶಿವಾಚಾರ್ಯರುಕಾರ್ಮಿಕರ ರಕ್ಷಣಾ ಕಿಟ್ ವಿತರಣೆಯಲ್ಲಿ ನೂರಾರು ಕೋಟಿ ಹಗರಣ: ಜೆಡಿಎಸ್ ವಾಗ್ದಾಳಿ ‘ರೌಡಿ ನಿಗ್ರಹ ದಳ’ ರಚನೆ ರಾಜಕೀಯ ಗಿಮಿಕ್-ಅಶೋಕ್ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಕಾಯುತ್ತಿರುವೆ-ರಾಮಲಿಂಗಾರೆಡ್ಡಿಸಿಎಂ ಸಂಧಾನ ಯಶಸ್ವಿ, ಖಾತೆ ಹಂಚಿಕೆ ಬಿಕ್ಕಟ್ಟು ಸದ್ಯಕ್ಕೆ ಸುಖಾಂತ್ಯಖಾತೆಗಾಗಿ ಕಿತ್ತಾಟ, ವಿಪಕ್ಷಗಳ ನಾಟಕ: ಜನಪರ ಕಾರ್ಯದ ಆಧಾರದ ಮೇಲೆ ಖಾತೆ ಹಂಚಿಕೆಯಾಗಲಿಕೆ.ಎನ್ ರಾಜಣ್ಣ ಅವರನ್ನು ಸಚಿವ ಸಂಪುಟ ಸೇರ್ಪಡೆಗೆ ಪ್ರಾಮಾಣಿಕ ಪ್ರಯತ್ನಅಂಡಮಾನ್ ಕಡಲಾಚೆ ಪ್ರದೇಶದಲ್ಲಿ ಭಾರಿ ಪ್ರಮಾಣದ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆವಿಧಾನ ಪರಿಷತ್ ಗೆ 5ನೇ ಅಭ್ಯರ್ಥಿ ಹೆಸರು ಘೋಷಿಸಿದ ಕಾಂಗ್ರೆಸ್