Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬಿಎಲ್‌ಎ-2 ಕಾರ್ಯಾಗಾರಕ್ಕೆ ನಿಖಿಲ್ ಕುಮಾರಸ್ವಾಮಿ ಚಾಲನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಮಾನತೆ
, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತಳಹದಿಯ ಮೇಲೆ ಸದೃಢ ಭಾರತವನ್ನು ಕಟ್ಟಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಇಂದಿಗೂ ನಮಗೆಲ್ಲರಿಗೂ ಸ್ಫೂರ್ತಿಯಾಗಿವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

​ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಬಿಎಲ್‌ಎ-2 (Booth Level Agents-2) ಕಾರ್ಯಾಗಾರಕ್ಕೆ ಚಾಲನೆ ನೀಡುವ ಮುನ್ನ, ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

​ನಂತರ ಮಾತನಾಡಿದ ಅವರು, ದೇಶದ ಏಕತೆ ಮತ್ತು ಪ್ರಗತಿಗೆ ಸಂವಿಧಾನದ ಆಶಯಗಳೇ ದಾರಿದೀಪ. ಆ ಮಹಾಚೇತನ ಹಾಕಿಕೊಟ್ಟ ದಾರಿಯಲ್ಲಿ ಸಾಗುವುದು ನಮ್ಮೆಲ್ಲರ ಕರ್ತವ್ಯ ಎಂದರು. ಕಾರ್ಯಾಗಾರದ ಉದ್ದೇಶದ ಬಗ್ಗೆ ಮಾತನಾಡುತ್ತಾ, ಪಕ್ಷದ ಸಂಘಟನೆಯಲ್ಲಿ ಬೂತ್ ಮಟ್ಟದ ಏಜೆಂಟ್‌ಗಳ ಪಾತ್ರ ನಿರ್ಣಾಯಕವಾಗಿದ್ದು, ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಯಕರ್ತರಿಗೆ ಕರೆ ನೀಡಿದರು. ​ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ