Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ 'ರೈತ ಸ್ವಾಭಿಮಾನ ಪಾದಯಾತ್ರೆಗೆ ಚಾಲನೆ':

ಚಂದ್ರವಳ್ಳಿ ನ್ಯೂಸ್, ​ಕನಕಪುರ:
ಅನ್ನದಾತರ ಏಳಿಗೆ ಹಾಗೂ ರೈತರ ಸ್ವಾಭಿಮಾನದ ಬದುಕಿಗಾಗಿ ಒತ್ತಾಯಿಸಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಕನಕಪುರದಲ್ಲಿ
'ರೈತ ಸ್ವಾಭಿಮಾನ ಯಾತ್ರೆ' ಯಶಸ್ವಿಯಾಗಿ ನಡೆಯಿತು.

​ಯಾತ್ರೆಯ ಆರಂಭಕ್ಕೂ ಮುನ್ನ ಕನಕಪುರದ ಶ್ರೀ ಶಿವ-ಪಾರ್ವತಿ ದೇವಸ್ಥಾನಕ್ಕೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ, ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಿದರು. ಬಳಿಕ ಕನಕಪುರ ಶಿವನಂದ ನಗರದ ರೈಸ್ ಮಿಲ್ ಸರ್ಕಲ್‌ನಿಂದ ಚೆನ್ನಬಸಪ್ಪ ಸರ್ಕಲ್‌ವರೆಗೆ ಸಹಸ್ರಾರು ರೈತರೊಂದಿಗೆ ಬೃಹತ್ ಪಾದಯಾತ್ರೆ ನಡೆಸಲಾಯಿತು.

Advertisement

​ಈ ವೇಳೆ ಮಾತನಾಡಿದ ಅವರು, ರೈತರ ಹಿತರಕ್ಷಣೆ ಮತ್ತು ಅವರ ಏಳಿಗೆಯೇ ನಮ್ಮ ಮುಖ್ಯ ಆದ್ಯತೆಯಾಗಿದ್ದು, ಪಾದಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಅನ್ನದಾತರ ಬೆಂಬಲ ನೆಮ್ಮದಿ ತಂದಿದೆ ಎಂದರು.

news_1790601473_9_278.webp

 

​ಈ ಬೃಹತ್ ಪಾದಯಾತ್ರೆಯಲ್ಲಿ ಜೆಡಿಎಸ್ ಪಕ್ಷದ ಮಾಜಿ ಶಾಸಕರು, ವಿವಿಧ ಹಂತದ ಪದಾಧಿಕಾರಿಗಳು, ಪ್ರಮುಖ ನಾಯಕರು, ಸಾವಿರಾರು ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ರೈತರು ಭಾಗವಹಿಸಿ ಸಾಥ್ ನೀಡಿದರು.

​​ಯಾತ್ರೆಯ ಉದ್ದಕ್ಕೂ ಸಾಥ್ ನೀಡಿದ ಸಾವಿರಾರು ರೈತರು ಹಾಗೂ ಪಕ್ಷದ ಕಾರ್ಯಕರ್ತರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ರಾಜ್ಯದ ಅನ್ನದಾತರ ಹಿತರಕ್ಷಣೆಗಾಗಿ ತಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪಕ್ಷದ ಮಾಜಿ ಶಾಸಕರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೋಮಾಳ ಜಮೀನಿನಲ್ಲಿ ಮನೆ ನಿರ್ಮಾಣಕ್ಕೆ ಹಕ್ಕುಪತ್ರ ನೀಡಿ.. ಬಡ ನಿರಾಶ್ರಿತರಿಂದ ಉಗ್ರ ಹೋರಾಟದ ಎಚ್ಚರಿಕೆ....!ಕೆವಿಕೆಗೆ ರಾಷ್ಟ್ರೀಯ ಪ್ರಯೋಗಾಲಯದ ಎನ್ಎಬಿಎಲ್ ಮಾನ್ಯತೆಚಿನ್ನಾಭರಣ ಕಳ್ಳತನ ಆರೋಪಿ ಬಂಧನ... ಬಂದಿತನಿಂದ 25ಲಕ್ಷ ಮೌಲ್ಯದ ಚಿನ್ನಾಭರಣ ವಶಸಮಾಜಮುಖಿ ಕಾರ್ಯ ಮಾಡುತ್ತಿರುವ ಜಯಂಟ್ಸ್ ಕೇರ್ ಫೌಂಡೇಶನ್ ಬಿಗ್ ಬಾಸ್ ಸೀಸನ್-13: ಮೊದಲ ವೈಲ್ಡ್ ಕಾರ್ಡ್ ಎಂಟ್ರಿಯಲ್ಲೇ ಅಬ್ಬರಿಸಿದ 'ಘಾಟಿ ಗಾನವಿ'!ಭೀಕರ ಉಗ್ರರ ಸಂಚು ಭೇದಿಸಿದ ರಾಜ್ಯ ಪೊಲೀಸರು: ಪ್ರಮುಖ ಬಿಜೆಪಿ ನಾಯಕರ ಹತ್ಯೆಗೆ ಸ್ಕೆಚ್‌!ಬಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ವಿಚಾರಣೆಬಿಜೆಪಿಯವರದ್ದು ಕಪಟ ನಾಟಕ; ಕೇಂದ್ರಕ್ಕೆ ಮನವಿ ಸಲ್ಲಿಸಲು ಬಾರದಿದ್ದರೆ ರೈತರ ಪರ ನಾವೇ ಕ್ರಮ: ಡಿ.ಕೆ. ಶಿವಕುಮಾರ್ಸಿಎಂ ಆಗುವ ಆಸೆ ಇದೆ: ಶಾಸಕ ಪ್ರದೀಪ್ ಈಶ್ವರ್ ಸ್ಫೋಟಕ ಮಾತುಗಳು! ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ: ಸ್ವಂತ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕೇಂದ್ರ ಸಚಿವ