ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗದ ಭ್ರಷ್ಟ ವ್ಯವಸ್ಥೆಯ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಭ್ರಷ್ಟಾಚಾರದ ವಿರುದ್ಧ ಬೃಹತ್ ಹೋರಾಟಕ್ಕೆ ಕರೆ ನೀಡಿದ್ದಾರೆ.
ಯುವಜನತೆಯ ಭವಿಷ್ಯದ ಜೊತೆ ಚೆಲ್ಲಾಟ: ಲಕ್ಷಾಂತರ ಯುವಕರ ಉದ್ಯೋಗದ ಕನಸನ್ನು ಮಾರಾಟ ಮಾಡುತ್ತಾ, KPSC ಯುವಜನತೆಯ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಆಯೋಗದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ಅಭಿಯಾನ: ಭ್ರಷ್ಟ KPSC ವ್ಯವಸ್ಥೆಯ ವಿರುದ್ಧ ಈಗಾಗಲೇ ಆರಂಭಿಸಲಾದ ಸಮರಕ್ಕೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸುಮಾರು 2,000ಕ್ಕೂ ಅಧಿಕ ಯುವಕರು ತಮ್ಮ ಹಕ್ಕೊತ್ತಾಯಗಳನ್ನು ದಾಖಲಿಸಿದ್ದಾರೆ.
ದೂರು ಸಂಗ್ರಹಕ್ಕೆ ಲಿಂಕ್ ಬಿಡುಗಡೆ: ಈ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಸಾರ್ವಜನಿಕರು ಹಾಗೂ ಅಭ್ಯರ್ಥಿಗಳಿಂದ ದೂರುಗಳು ಮತ್ತು ಸಲಹೆಗಳನ್ನು ಸ್ವೀಕರಿಸಲು tinyurl.com/KPSCSuggestions ಎಂಬ ವಿಶೇಷ ಲಿಂಕ್ ಅನ್ನು ಬಿಡುಗಡೆ ಮಾಡಿದ್ದಾರೆ.
ಇದು ಕೇವಲ ಅಭಿಯಾನವಲ್ಲ; ಕೆಪಿಎಸ್‌ಸಿ ಉಳಿಸಲು ಮತ್ತು ಭ್ರಷ್ಟ ವ್ಯವಸ್ಥೆಯನ್ನು ಬೇರುಸಹಿತ ಕಿತ್ತೊಗೆಯಲು ಆರಂಭಿಸಿರುವ ಜನಪರ ಹೋರಾಟ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.




