ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಧಾನಿ ಬೆಂಗಳೂರಿನ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ 'ಜೆಪಿ ಭವನ'ದಲ್ಲಿ ಜೆಡಿಎಸ್ ಯುವ ಘಟಕದ రాజ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಪ್ರಮುಖ ಸುದ್ದಿಗೋಷ್ಠಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯದ ಪ್ರಚಲಿತ ರಾಜಕೀಯ ವಿದ್ಯಮಾನಗಳು, ರಾಜ್ಯ ಸರ್ಕಾರದ ನೀತಿಗಳು, ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಜೆಡಿಎಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪಕ್ಷ ಹಮ್ಮಿಕೊಂಡಿರುವ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಅವರು ಸುದೀರ್ಘವಾಗಿ ಮಾಹಿತಿ ಹಂಚಿಕೊಂಡರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಹಿರಿಯ ನಾಯಕರು, ಶಾಸಕರು ಹಾಗೂ ಮಾಧ್ಯಮ ವಿಭಾಗದ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.




