Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒನಕೆ ಓಬವ್ವ ಜಯಂತಿ ಅದ್ದೂರಿ ಆಚರಣೆಗೆ ಸಿದ್ಧತೆ-ನಿರಂಜನಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮುಂದಿನ ತಿಂಗಳು ನಡೆಯುವ ಒನಕೆ ಓಬವ್ವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಸಂಬಂಧ ಪ್ರವಾಸಿ ಮಂದಿರದಲ್ಲಿ ಛಲವಾದಿ ಜನಾಂಗದವರು ಭಾನುವಾರ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಿದರು.


ನಗರಸಭೆ ಮಾಜಿ ಅಧ್ಯಕ್ಷ ಛಲವಾದಿ ಜನಾಂಗದ ಮುಖಂಡ ಹೆಚ್.ಸಿ.ನಿರಂಜನಮೂರ್ತಿ ಸಭೆಯನ್ನುದ್ದೇಶಿಸಿ ಮಾತನಾಡುತ್ತ ಒನಕೆಯ ಮೂಲಕ ಶತ್ರುಗಳನ್ನು ಸದೆಬಡಿದು ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ನಾಡಿನಾದ್ಯಂತ ಪರಿಚಯಿಸಿರುವ ಒನಕೆ ಓಬವ್ವಳ ಜಯಂತಿಯನ್ನು ಸರ್ಕಾರದ ಜೊತೆ ನಾವುಗಳು ಕೈಜೋಡಿಸಿ ಆಚರಿಸಬೇಕಾಗಿರುವುದರಿಂದ ಛಲವಾದಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಯಂತಿಯನ್ನು ಯಶಸ್ವಿಗೊಳಿಸುಬೇಕು. ಜಯಂತಿಗೆ ಸಂಬಂಧಿಸಿದಂತೆ ನ.೩ ರಂದು ಮತ್ತೊಮ್ಮೆ ನಡೆಯುವ ಪೂವಭಾವಿ ಸಭೆಗೆ ಛಲವಾದಿ ಸಮುದಾಯದವರು ಆಗಮಿಸಿ ಸೂಕ್ತ ಸಲಹೆಗಳನ್ನು ನೀಡುವಂತೆ ಮನವಿ ಮಾಡಿದರು.

ಡಾ.ಪಿ.ವಿ.ಶ್ರೀಧರಮೂರ್ತಿ ಮಾತನಾಡುತ್ತ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸೋಣ. ಜನಾಂಗದ ಎಲ್ಲರ ಸಹಕಾರ ಅತಿ ಮುಖ್ಯ ಎಂದು ಕೋರಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಮಾತನಾಡುತ್ತ ಛಲವಾದಿ ಸಮುದಾಯದವರಲ್ಲಿ ಜಾಗೃತಿ ಮೂಡಿಸಬೇಕಾಗಿರುವುದರಿಂದ ಒನಕೆ ಓಬವ್ವಳ ಜಯಂತಿ ಮೂಲಕವಾದರೂ ಎಲ್ಲರೂ ಒಂದೆಡೆ ಸೇರೋಣ. ಮುಂದಿನ ಪೀಳಿಗೆಗೆ ಓಬವ್ವಳ ಸಾಹಸವನ್ನು ತಿಳಿಸುವುದರ ಜೊತೆಗೆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಿದೆ. ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ

ಜನಾಂಗದ ಇತರೆ ಮಕ್ಕಳನ್ನು ಉತ್ತೇಜಿಸಿದಂತಾಗುತ್ತದೆ. ಹೋರಾಟ, ಸಂಘಟನೆ ಮೂಲಕ ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ಪಡೆದುಕೊಂಡು ಮಕ್ಕಳನ್ನು ವಿದ್ಯಾವವಂತರನ್ನಾಗಿ ಮಾಡಬೇಕಿದೆ ಎಂದು ತಿಳಿಸಿದರು.

ಶಾರದಾ ಬ್ರಾಸ್‌ಬ್ಯಾಂಡ್‌ನ ಗುರುಮೂರ್ತಿ ಮಾತನಾಡಿ ಒನಕೆ ಓಬವ್ವ ಜಯಂತಿಯಂದು ನಿಗಧಿತ ಸಮಯಕ್ಕೆ ಸರಿಯಾಗಿ ಮೆರವಣಿಗೆ ಹೊರಡಬೇಕು. ಅದಕ್ಕಾಗಿ ಸಮುದಾಯದ ಎಲ್ಲರೂ ಸಮಯಕ್ಕೆ ಸರಿಯಾಗಿ ಆಗಮಿಸಿದರೆ ಒಳ್ಳೆಯದು. ಜನಾಂಗದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಜಯಂತಿಯಲ್ಲಿ ಪ್ರೋತ್ಸಾಹಿಸಿದರೆ ಅದಕ್ಕೆ ಬೇಕಾದ ಎಲ್ಲಾ ರೀತಿಯ ನೆರವು ನೀಡುತ್ತೇನೆ. ಹೊಳಲ್ಕೆರೆ ರಸ್ತೆಯಲ್ಲಿರುವ ಗೌರಸಮುದ್ರ ಮಾರಮ್ಮನ ದೇವಸ್ಥಾನದ ಸಮೀಪದಿಂದ ಮೆರವಣಿಗೆ ಹೊರಡೋಣ ಎಂದು ಸಲಹೆ ನೀಡಿದರು.

ಭಾರ್ಗವಿ ದ್ರಾವಿಡ್ ಮಾತನಾಡುತ್ತ ಒನಕೆ ಓಬವ್ವ ಜಯಂತಿಯನ್ನು ಹಬ್ಬದ ರೀತಿಯಲ್ಲಿ ಆಚರಿಸೋಣ. ಛಲವಾದಿ ಜನಾಂಗದವರು ಕುಟುಂಬ ಸಮೇತ ಜಯಂತಿಯಲ್ಲಿ ಪಾಲ್ಗೊಂಡು ಚಿತ್ರದುರ್ಗದಲ್ಲಿ ಓಬವ್ವಳನ್ನು ಸ್ಮರಿಸಿಕೊಳ್ಳುವಂತಾಗಬೇಕೆಂದು ಹೇಳಿದರು.

ಎಸ್.ಎನ್.ರವಿಕುಮಾರ್ ಮಾತನಾಡಿ ನ.೧೧ ರಂದು ಸರ್ಕಾರದ ವತಿಯಿಂದ ಆಚರಿಸಲಾಗುವ ಒನಕೆ ಓಬವ್ವ ಜಯಂತಿಯಲ್ಲಿ ಛಲವಾದಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಕ್ತಿ ಪ್ರದರ್ಶಿಸುವಂತೆ ಮನವಿ ಮಾಡಿದರು.

ಶಿಕ್ಷಣ ಇಲಾಖೆಯ ನಾಗರಾಜ್, ಹೆಚ್.ಅಣ್ಣಪ್ಪಸ್ವಾಮಿ, ದಯಾನಂದ್, ಚನ್ನಬಸಪ್ಪ ಮುಸ್ಟೂರು, ಮಂಜಣ್ಣ, ಜಯರಾಂ ಕೆ. ಶಶಾಂಕ್, ರಂಗಸ್ವಾಮಿ ಚಿಕ್ಕಪುರ, ರಾಮಲಿಂಗಪ್ಪ, ಪರಮೇಶ್ ಪೂಜಾರ್, ಮಂಜುನಾಥ್, ಜಯಣ್ಣ, ನಾಗರಾಜ್ ಪೈಲೆಟ್, ಉಮಾಶಂಕರ್ ಸೇರಿದಂತೆ ಛಲವಾದಿ ವಂಶಸ್ಥರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ