Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸೇತುವೆ ನಿರ್ಮಾಣದಲ್ಲಿ ನೂತನ ತಂತ್ರಜ್ಞಾನ ಅಳವಡಿಸಿ: ನಿತಿನ್ ಗಡ್ಕರಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮಲ್ಲಿರುವ ಜ್ಞಾನ, ತಂತ್ರಜ್ಞಾನವನ್ನು ಸೇತುವೆ ನಿರ್ಮಾಣದ ಹೊಸ ಯೋಜನೆಗಳಿಗೆ ಅಳವಡಿಸಿಕೊಂಡರೆ ದೇಶ ಹೆಚ್ಚು ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ತಿಳಿಸಿದರು.

ಇಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಇಂಡಿಯನ್ ರೋಡ್ ಕಾಂಗ್ರೆಸ್, ಕನಾಟಕ ಲೋಕೋಪಯೋಗಿ ಇಲಾಖೆ, ಪಿಐಎಆರ್‍ಸಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಅಭಿವೃದ್ಧಿಶೀಲ ಸೇತುವೆ ನಿರ್ವಹಣೆಕುರಿತ 2 ದಿನಗಳ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು.

ವಿಶ್ವದ ಆರ್ಥಿಕತೆಯಲ್ಲಿ ಭಾರತ ಗುರುತಿಸಿಕೊಂಡಿದೆ. ನಾವು ನಮ್ಮ  ಜ್ಞಾನದ ಸಹಾಯದಿಂದ ಸಂಪತ್ತನ್ನು ವೃದ್ಧಿಸುವ ಕಡೆಗೆ ಗಮನಹರಿಸಬೇಕು. ಸೇತುವೆ, ರಸ್ತೆ ನಿರ್ಮಾಣದಲ್ಲಿ ವೃತ್ತಿಪರತೆ ಕೋರಿ ಅದು ಶಾಸ್ವತವಾಗಿ ಉಳಿಯುವಂತೆ ಮಾಡಬೇಕು. ಕೆಲ ಸಮುದ್ರ ತೀರದ ಸೇತುವೆಗಳು ಕುಸಿದಿದ್ದು, ಈ ಕುರಿತು ನಾವು ಮೌಲ್ಯಮಾಪನ ನಡೆಸುವ ಅವಶ್ಯಕತೆ ಇದೆ. ಹಾಗೆಯೇ ಸಮಯದ ಪ್ರಾಮುಖ್ಯತೆಯನ್ನು ಅರಿತು, ನಿರ್ದಿಷ್ಟ ಸಮಯದಲ್ಲಿ ಉತ್ಕøಷ್ಟ ಗುಣಮಟ್ಟದ ಸೇತುವೆ ನಿರ್ಮಾಣ ಮಾಡಬೇಕಿದೆ. ಈಗ ಇಡೀ ಜಗತ್ತೇ ಡಿಜಿಟಲ್ ಯುಗಕ್ಕೆ ಕಾಲಿಡುತ್ತಿದೆ. ಹೇಗೆ ಹೊಸ ತಂತ್ರಜ್ಞಾನವನ್ನು ನಾವು ಅಳವಡಿಸಿಕೊಳ್ಳಬಹುದೆಂಬ ಚಿಂತನೆಯನ್ನು ನಾವು ನಡೆಸಬೇಕು. ಬೇರೆ ದೇಶಗಳಿಗೆ ತೆರಳಿ ಅಧ್ಯಯನ ನಡೆಸಿ, ಅವರಿಂದ ಹೊಸ ತಂತ್ರಜ್ಞಾನವನ್ನು ಅರಿತುಕೊಳ್ಳಬೇಕಿದೆ ಎಂದರು.

ಇದೀಗ ನಾಗ್ಪುರದಲ್ಲಿ ಅತ್ಯಾಧುನಿಕ ಎಲೆಕ್ಟ್ರಿಕ್ ಬಸ್‍ಗಳನ್ನು ಅನಾವರಣಗೊಳಿಸಲಾಗುತ್ತಿದೆ. ಇದು ಕಡಿಮೆ  ಟಿಕೆಟ್ ದರದಲ್ಲಿ ಉನ್ನತ ಸೌಕರ್ಯದೊಂದಿಗೆ ಸಂಚರಿಸಲಾಗುತ್ತಿದ್ದು, ಇದರಿಂದ ಪೆಟ್ರೋಲ್, ಡೀಸೆಲ್ ಅವಲಂಬನೆ ಕಡಿಮೆ ಆಗಲಿದೆ ಎಂದರು.

ಹೊಸ ದೃಷ್ಠಿಕೋನ, ತ್ಯಾಜ್ಯವಸ್ತುಗಳ ನಿರ್ವಹಣೆ, ಗುಣಮಟ್ಟದ ನಿರ್ವಹಣೆ, ವಿಶ್ವಾಸಾರ್ಹತೆಗಳಿಂದ ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಸಮರ್ಥವಾಗಿ ನಿರ್ವಹಿಸಬಹುದೆಂದು ಅವರು ತಿಳಿಸಿದರು.

ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಮಾತನಾಡಿ, ರಾಜ್ಯದ ಪಶ್ಚಿಮ ಘಟ್ಟಗಳಲ್ಲಿ ಬಹಳಷ್ಟು ಸೇತುವೆಗಳು ನೆಲಸಮಗೊಂಡಿರುವುದು ವಿಪರ್ಯಾಸ. ಹೊಸ ತಂತ್ರಜ್ಞಾನದಲ್ಲಿ ಇವುಗಳ ನಿರ್ಮಾಣ, ನಿರ್ವಹಣೆಯನ್ನು ನಡೆಸಬೇಕು. ಸಮಸ್ಯೆಗಳಿಗೆ ವಸ್ತುನಿಷ್ಠ ಶಾಶ್ವತ ಪರಿಹಾರ ಒದಗಿಸಬೇಕು. ನಾವು ಇಂದು ಹವಾಮಾನ ಬದಲಾವಣೆ, ಪ್ರಾಕೃತಿಕ ವಿಕೋಪಗಳಂತಹ ಸಮಸ್ಯೆಗಳನ್ನು ಎದುರುಸುತ್ತಿದ್ದೇವೆ. ಸೇತುವೆ ನಿರ್ಮಾಣದಲ್ಲಿ ನೂತನ ತಂತ್ರಜ್ಞಾನ ಆವಿಷ್ಕಾರದಿಂದ ಬದಲಾವಣೆ ತರಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.


ಸಮಾರಂಭದಲ್ಲಿ, ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಡಿಜಿ ಡಿ. ಸಾರಂಗಿ, ಎಡಿಜಿ ಎಸ್.ಕೆ. ನಿರ್ಮಲ್, ಲೋಕೋಪಯೋಗಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಮತ್ತು ರಾಜ್ಯ ನಿರ್ದೇಶನ ಸಮಿತಿಯ ಅಧ್ಯಕ್ಷರಾದ ಸತ್ಯನಾರಾಯಣ, ಮುಖ್ಯ ಯೋಜನಾ ಅಧಿಕಾರಿಗಳು ಮತ್ತು ಕರ್ನಾಟಕ ಸರ್ಕಾರದ ರಾಜ್ಯ ಸಂಘಟಕರಾದ ಎಸ್.ಎಫ್. ಪಾಟೀಲ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ