Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದಲ್ಲೇ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರ
, ಲೂಟಿಕೋರತನ ಅವಿಭಾಜ್ಯ ಅಂಗ ಎಂಬುದನ್ನು ಸ್ವತಃ ನಿಮ್ಮ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ ಅವರೇ ಸ್ಪಷ್ಟವಾಗಿ ಬಹಿರಂಗಪಡಿಸಿದ್ದಾರೆ ಎನ್ನುವುದನ್ನ ಸ್ಪಷ್ಟಪಡಿಸಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಇದಕ್ಕೇನು ಹೇಳುತ್ತೀರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಟುವಾಗಿ ಪ್ರಶ್ನಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಭ್ರಷ್ಟಾಚಾರ, ಲೂಟಿಕೋರತನ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅವಿಭಾಜ್ಯ ಅಂಗ ಎಂಬುದನ್ನು ಸ್ವತಃ ನಿಮ್ಮ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ ಅವರೇ ಸ್ಪಷ್ಟವಾಗಿ ಬಹಿರಂಗಪಡಿಸಿದ್ದಾರೆ. ದೇಶದಲ್ಲೇ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1“ ಎಂದು ಹೇಳುವ ಮೂಲಕ ಈ ಸರ್ಕಾರದ ಕರಾಳ ಭ್ರಷ್ಟತೆಯ ಮುಖವಾಡವನ್ನು ಬಯಲು ಮಾಡಿ ರಾಜ್ಯದ ಘನತೆ ಕುಗ್ಗಿದ ಸ್ವರೂಪವನ್ನು ಬಿಚ್ಚಿಟ್ಟಿದ್ದಾರೆ ಆ ಮೂಲಕ ರಾಷ್ಟ್ರ ಮಟ್ಟದಲ್ಲಿ ರಾಜ್ಯ ನಿಮ್ಮ ಆಡಳಿತದಲ್ಲಿ ಸಂಪೂರ್ಣ ಭ್ರಷ್ಟತೆಯ ಕಪ್ಪುಮಸಿ ಮೆತ್ತಿಕೊಂಡಿರುವುದನ್ನು ಅನಾವರಣ ಮಾಡಿ ಕರ್ನಾಟಕ ವಿಶ್ವಮಟ್ಟದಲ್ಲಿ ತಲೆತಗ್ಗಿಸುವ ಪರಿಸ್ಥಿತಿ ಇರುವುದನ್ನು ವಿವರಿಸಿದ್ದಾರೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

"ಜನಪ್ರತಿನಿಧಿಗಳು ಹೇಗೆ ಇರುತ್ತಾರೊ ಅದರಂತೆಯೇ ಅಧಿಕಾರಿಗಳೂ ಇರುತ್ತಾರೆ, ಮುಖ್ಯಮಂತ್ರಿ ಏನೇ ಹೇಳಿದರೂ ಭ್ರಷ್ಟಾಚಾರದ ಕುರಿತು ನನ್ನ ವೈಯಕ್ತಿಕ ಅಭಿಪ್ರಾಯ ಇದೇ ಇರುತ್ತದೆ"  ಎಂದು ಹೇಳುವ ಮೂಲಕ 'ಯಥಾ ರಾಜ ತಥಾ ಮಂತ್ರಿಗಳು, ಅಧಿಕಾರಿಗಳು ಎಂಬ ಮಾತು ನಿಮ್ಮ ಆಡಳಿತದಲ್ಲಿ ಅಕ್ಷರಶಃ ಅನ್ವಯಿಸುತ್ತಿದೆ ಎನ್ನುವುದನ್ನು ಹೇಳುವ ಮೂಲಕ ವಾಸ್ತವ ಸ್ಥಿತಿಯ ಮೇಲೆ ನೇರವಾಗಿ ಬೆಳಕು ಚೆಲ್ಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಹಿಂದಿನ ನಮ್ಮ ಮಾನ್ಯ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರವನ್ನು 40% ಸರ್ಕಾರ ಎಂಬ ಸುಳ್ಳು ಅಪಪ್ರಚಾರಗಳನ್ನು ನಡೆಸಿ ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸಿ ಜಗತ್ತಿನಲ್ಲಿ ನಾವೇ ಸತ್ಯವಂತರು ಎಂದು ಡಂಗುರ ಸಾರಿ ಅಧಿಕಾರಕ್ಕೆ ಬಂದ ನಿಮ್ಮ ನೈಜ ಮುಖವಾಡ ಇದೀಗ ಕಳಚಿ ಬಿದ್ದಿದೆ ಎಂದು ವಿಜಯೇಂದ್ರ ಟೀಕಾಪ್ರಹಾರ ಮಾಡಿದ್ದಾರೆ.

ಭ್ರಷ್ಟತೆಯ ಕೆನ್ನಾಲಿಗೆ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆ ಏರಿಸುವ ಮೂಲಕ ಜನಸಾಮಾನ್ಯರು ಹಾಗೂ ಕಡು ಬಡವರ ದೈನಂದಿನ ಬದುಕಿನ ಸ್ಥಿತಿಯನ್ನು ಸುಡುತ್ತಿದೆ. ಇದಕ್ಕಾಗಿ ನಿಮ್ಮ ಸರ್ಕಾರದ ವಿರುದ್ಧ ಜನಬೆಂಬಲಿತ  ಬಿಜೆಪಿ ಜನಾಕ್ರೋಶದ ಹೋರಾಟದ ಯಾತ್ರೆರಾಜ್ಯಾದ್ಯಂತ ಯಶಸ್ವಿಯಾಗಿ ಮುನ್ನಡೆದಿದೆ.

ನಿಮ್ಮ ಆಡಳಿತದಿಂದ ರಾಜ್ಯವನ್ನು ಮುಕ್ತಗೊಳಿಸದೇ ಕರುನಾಡಿಗೆ ಮುಕ್ತಿಯಿಲ್ಲ ಎಂಬ ನಿರ್ಧಾರಕ್ಕೆ ರಾಜ್ಯದ ಜನ ಬಂದಿದ್ದಾರೆ. ಸದ್ಯದಲ್ಲೇ ಜನಾಕ್ರೋಶದ ಬಿಸಿ ನಿಮ್ಮ ಸರ್ಕಾರವನ್ನು ಸುಟ್ಟು ಪಥನಗೊಳಿಸಲಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ