Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್

ಚಂದ್ರವಳ್ಳಿ ನ್ಯೂಸ್, ನವದೆಹಲಿ: 
ಧಾರ್ಮಿಕ ಮತಾಂತರ ಹಾಗೂ ಜಾತಿ ಆಧಾರಿತ ಮೀಸಲಾತಿಗೆ ಸಂಬಂಧಿಸಿದಂತೆ ಅತ್ಯಂತ ಪ್ರಮುಖ ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು
, ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸರಿ ಎಂದು ಎತ್ತಿಹಿಡಿದಿದೆ.

ಹಿಂದೂ ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳನ್ನು 'ಹಿಂದುಳಿದ ವರ್ಗದ (ಮುಸ್ಲಿಂ)' ಅಡಿಯಲ್ಲಿ ಸೇರಿಸಿ ಅವರಿಗೆ ಮೀಸಲಾತಿ ಸೌಲಭ್ಯಗಳನ್ನು ಒದಗಿಸಲು ಮುಂದಾಗಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಹಿಂದೆ ರದ್ದುಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ನೀಡಿದ್ದ ನಿರ್ಧಾರವನ್ನು ಎತ್ತಿಹಿಡಿದಿದೆ.

Advertisement

ವೇಗವಾಗಿ ಬದಲಾಗುತ್ತಿರುವ ಸಾಮಾಜಿಕ ಸನ್ನಿವೇಶದಲ್ಲಿ, ಧರ್ಮ ಬದಲಾಯಿಸಿದ ವ್ಯಕ್ತಿಯೊಬ್ಬರು ತಮ್ಮ ಪೂರ್ವಾಶ್ರಮದ (ಹಿಂದಿನ) ಸಾಮಾಜಿಕ ವರ್ಗದ ಆಧಾರದ ಮೇಲೆ ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ಸಾಧ್ಯವೇ? ಅಥವಾ ಮತಾಂತರಗೊಂಡ ನಂತರ 'ಹಿಂದುಳಿದ ವರ್ಗ (ಮುಸ್ಲಿಂ)' ಸಮುದಾಯದ ಸದಸ್ಯರಾಗಿ ಅರ್ಹತೆ ಗಿಟ್ಟಿಸಿಕೊಳ್ಳಬಹುದೇ? ಎಂಬುದು ಈ ಪ್ರಕರಣದಲ್ಲಿ ಎದುರಾಗಿದ್ದ ಪ್ರಮುಖ ಕಾನೂನು ಪ್ರಶ್ನೆಯಾಗಿತ್ತು.

ಏನಿದು ಪ್ರಕರಣ?
ಇಡೀ ಕಾನೂನು ಸಮರ ತಮಿಳುನಾಡಿನ ತೂತುಕುಡಿ ಜಿಲ್ಲೆಯ ವ್ಯಕ್ತಿಯೊಬ್ಬರು ಸಲ್ಲಿಸಿದ ಅರ್ಜಿಯಿಂದ ಆರಂಭವಾಗಿತ್ತು. ಹಿಂದೂ ಕುಟುಂಬದಲ್ಲಿ ಜನಿಸಿದ್ದ ಇವರು, 2016ರಲ್ಲಿ ಇಸ್ಲಾಂ ಧರ್ಮದ ಪದ್ಧತಿಯಂತೆ ಮುಸ್ಲಿಂ ಮಹಿಳೆಯೊಬ್ಬರನ್ನು ವಿವಾಹವಾಗಿ, ಅಧಿಕೃತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದರು. ಧರ್ಮ ಬದಲಾವಣೆಯ ಬಳಿಕ ತಮ್ಮ ಹೆಸರನ್ನು 'ಸಮೀರ್ ಅಹ್ಮದ್' ಎಂದು ಬದಲಾಯಿಸಿಕೊಂಡಿದ್ದರು.

ಅರ್ಜಿದಾರರ ವಾದದ ಪ್ರಕಾರ, ಕಾಯತಾರ್‌ನ 'ಸುನ್ನತ್ ಜಮಾತ್' ಸಂಸ್ಥೆಯು 2015ರಲ್ಲೇ ಅವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿರುವುದನ್ನು ದೃಢೀಕರಿಸಿ ಪ್ರಮಾಣಪತ್ರ ನೀಡಿತ್ತು. ಇದರ ಆಧಾರದ ಮೇಲೆ ಅವರು ತಮಿಳುನಾಡಿನ 'ಮುಸ್ಲಿಂ ಲೆಬ್ಬೈ' ಸಮುದಾಯಕ್ಕೆ ಸೇರಿದವರೆಂದು ತಮ್ಮನ್ನು ಗುರುತಿಸಿಕೊಂಡು, ಸರ್ಕಾರದ ಹಿಂದುಳಿದ ವರ್ಗದ ಮೀಸಲಾತಿ ಸೌಲಭ್ಯ ಪಡೆಯಲು 'ಸಮುದಾಯ ಪ್ರಮಾಣಪತ್ರ'ಕ್ಕಾಗಿ ಅರ್ಜಿ ಸಲ್ಲಿಸಿದ್ದರು.

ತಹಸೀಲ್ದಾರ್ ನಿರ್ಧಾರ ಮತ್ತು ಹೈಕೋರ್ಟ್ ಮೆಟ್ಟಿಲೇರಿದ ಅರ್ಜಿ
ಆದರೆ
, ಕಾಯತಾರ್‌ನ ತಹಶೀಲ್ದಾರರು ಅರ್ಜಿದಾರರ ಮನವಿಯನ್ನು ಪರಿಶೀಲಿಸಿ, ಕೇವಲ ಧರ್ಮ ಮತಾಂತರಗೊಂಡ ತಕ್ಷಣವೇ ಹಿಂದುಳಿದ ಮುಸ್ಲಿಂ ವರ್ಗದ ಮೀಸಲಾತಿ ಪಡೆಯಲು ಅರ್ಹರಾಗುವುದಿಲ್ಲ ಎಂದು ಸ್ಪಷ್ಟಪಡಿಸಿ ಅರ್ಜಿಯನ್ನು ತಿರಸ್ಕರಿಸಿದ್ದರು. ತಹಶೀಲ್ದಾರರ ಈ ಕ್ರಮವನ್ನು ಪ್ರಶ್ನಿಸಿ ಅರ್ಜಿದಾರರು ಮದ್ರಾಸ್ ಹೈಕೋರ್ಟ್‌ನ ಮೊರೆ ಹೋಗಿದ್ದರು.

ಮದ್ರಾಸ್ ಹೈಕೋರ್ಟ್ ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿ, ಮತಾಂತರದ ಆಧಾರದ ಮೇಲೆ ಜಾತಿ ಮೀಸಲಾತಿ ಸೌಲಭ್ಯಗಳನ್ನು ವಿಸ್ತರಿಸಲಾಗುವುದಿಲ್ಲ ಎಂದು ಹೇಳಿ, ತಮಿಳುನಾಡು ಸರ್ಕಾರದ ಆದೇಶವನ್ನು ರದ್ದುಗೊಳಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್‌ನ ಈ ನಿಲುವನ್ನು ಎತ್ತಿಹಿಡಿಯುವ ಮೂಲಕ ಮತಾಂತರ ಮತ್ತು ಮೀಸಲಾತಿ ವಿಚಾರದಲ್ಲಿ ಸ್ಪಷ್ಟ ಸಂದೇಶ ರವಾನಿಸಿದೆ.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ