Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ತನಿಖೆಗೆ ಹಿಂಜರಿಕೆ ಇಲ್ಲ, ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟ-ಸಿಎಂ ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದೆ.


ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿ, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಆದೇಶ ಪ್ರತಿ ಪಡೆದು ಓದಿದ ಬಳಿಕ‌ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ.

ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. 

ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ.  

-ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ನಿರಾಕರಿಸಿದ್ದರು.  

ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.   ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.

 -ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.  -ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ.  ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ.

 - ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ. - ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.

 -ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ 

- ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. 

-ನನ್ನ ೪೦ ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ. 

- ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. - ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ. 

- ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. - ಇದೇ ಬಿಜೆಪಿ, ಜೆಡಿಎಸ್  ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ. 

-ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್‌ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. -ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು.

 -ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ ೧೩೬ ಸದಸ್ಯರ ಬಲ ನೀಡಿ ಗೆಲ್ಲಿಸಿದರು. -ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು  ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ. 

-ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ.  ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್  ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ