ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿಯ ಹಿಂದೆ ಯಾವುದೇ ಅಸಮಾಧಾನದ ಕಾರಣಗಳಿಲ್ಲ. ಒಂದು ವೇಳೆ ಅಸಮಾಧಾನ ಇದ್ದಿದ್ದರೆ ಅವರು ಆ ಹುದ್ದೆಗೇ ಅಂಟಿಕೊಳ್ಳುತ್ತಿದ್ದರು ಹೊರತು ರಾಜೀನಾಮೆ ಕೊಡುತ್ತಿರಲಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಸಿದ್ದರಾಮಯ್ಯ ಮೊದಲಿನಿಂದಲೂ ಹೇಳುತ್ತ ಬಂದಿದ್ದರು. ಅದರಂತೆ ನಡೆದುಕೊಂಡಿದ್ದು, ಈಗ ಆ ಅಧ್ಯಾಯ ಮುಗಿದುಹೋಗಿದೆ. ಈ ವಿಚಾರವನ್ನು ಪದೇ ಪದೆ ಕೆದಕಿ ಚರ್ಚೆ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಸಿದ್ದರಾಮಯ್ಯ ಅವರು ಪ್ರಸ್ತುತ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿರುವುದರಿಂದ ಈ ದೆಹಲಿ ಭೇಟಿ ಅತ್ಯಂತ ಸಹಜ ಪ್ರಕ್ರಿಯೆಯಾಗಿದೆ. ಇದಕ್ಕೆ ಬೇರೆ ಬೇರೆ ರಾಜಕೀಯ ಬಣ್ಣ ಬಳೆಯುವುದು ಸರಿಯಲ್ಲ ಎಂದರು.
ಅಪೆಕ್ಸ್‌ಬ್ಯಾಂಕ್‌ಅಧ್ಯಕ್ಷರ ಆಯ್ಕೆಯಲ್ಲಿ ಯಾವುದೇ ಅಸಮಾಧಾನವಿಲ್ಲ:
ಅಪೆಕ್ಸ್‌ಬ್ಯಾಂಕ್‌ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದು ಬೇಡ, ಬದಲಿಗೆ ಅವಿರೋಧವಾಗಿ ಆಯ್ಕೆ ಮಾಡಬೇಕು ಎಂಬುದು ಪಕ್ಷದ ನಿರ್ಣಯವಾಗಿತ್ತು. ಅದರಂತೆ ಕೊನೆಯ ಹಂತದಲ್ಲಿ ವಿಧಾನ ಪರಿಷತ್‌ಸದಸ್ಯ ಎಸ್. ರವಿ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಈ ನಿರ್ಣಾಯಕ ಸಭೆಯಲ್ಲಿ ಸಚಿವ ಕೆ.ಎನ್. ರಾಜಣ್ಣ ಕೂಡ ಉಪಸ್ಥಿತರಿದ್ದರು. ಅವರ ಸಂಪೂರ್ಣ ಸಮ್ಮತಿಯ ಮೇರೆಗೆಯೇ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದೆ. ಹೀಗಾಗಿ ಈ ವಿಷಯದಲ್ಲಿ ಯಾವುದೇ ಗೊಂದಲ ಅಥವಾ ಅಸಮಾಧಾನದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.
ಇದೇ ವೇಳೆ, ಅಪೆಕ್ಸ್‌ಬ್ಯಾಂಕ್‌ಅಧ್ಯಕ್ಷ ಹುದ್ದೆಯನ್ನು 2.5 ಹಾಗೂ 2.5 ವರ್ಷಗಳ ಅಧಿಕಾರ ಹಂಚಿಕೆ ಸೂತ್ರದಡಿ ವಿಂಗಡಿಸಲಾಗಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿ, ಅಪೆಕ್ಸ್‌ಬ್ಯಾಂಕ್‌ಎನ್ನುವುದು ಒಂದು ಸ್ವತಂತ್ರ ಹಾಗೂ ಪಕ್ಷಾತೀತ ಸಂಸ್ಥೆಯಾಗಿದೆ. ಅದರ ಆಡಳಿತ ಮಂಡಳಿಯ ನಿರ್ದೇಶಕರೇ ಮುಂದಿನ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ ಎಂದು ತಿಳಿಸಿದರು.




