Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮ ಮೆಟ್ರೋಗೆ "ಬಸವ ಮೆಟ್ರೋ" ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ "ಬಸವ ಮೆಟ್ರೋ" ಎಂದು ಘೋಷಿಸಿ ಬಿಡುತ್ತಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ವಿಶ್ವಗುರು ಬಸವಣ್ಣ ಅವರನ್ನು "ಕರ್ನಾಟಕ ಸಾಂಸ್ಕೃತಿಕ ನಾಯಕ" ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ 'ಬಸವ ಸಂಸ್ಕೃತಿ ಅಭಿಯಾನ-2025' ರ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.


ನಮ್ಮಲ್ಲಿ ಅನೇಕ ಜಾತಿ, ಅನೇಕ‌ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು.

ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ನಂಬಿಕೆ - ಬದ್ಧತೆ ಇಟ್ಟುಕೊಂಡಿದ್ದೇನೆ.

ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದು ಸಿಎಂ ಅವರು ತಿಳಿಸಿದ್ದಾರೆ.

ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ.

ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ.

ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. 

ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯವಾದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ.

ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಆಗುತ್ತೇವೆ.

ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. 

ವಿಶ್ವಗುರು ಬಸವಣ್ಣ ಅವರನ್ನು "ಕರ್ನಾಟಕದ ಸಾಂಸ್ಕೃತಿಕ ನಾಯಕ" ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ 'ಬಸವ ಸಂಸ್ಕೃತಿ ಅಭಿಯಾನ-2025' ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿಧ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶರಣ ಸಂಸ್ಕೃತಿ ಬಗೆಗಿನ ಬದ್ಧತೆಯನ್ನು ಶ್ಲಾಘಿಸಿ, ಸನ್ಮಾನಿಸಿದರು.

ಅರಮನೆ ಮೈದಾನದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಲಿಂಗಾಯತ ಧರ್ಮ ಚಳವಳಿಯ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ