Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ"ಗೆ 2024 ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2024 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು ಅಥವಾ ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ನಾಮನಿರ್ದೇಶನ ಕೂಡ ಮಾಡಬಹುದಾಗಿದೆ.

ಸೆಪ್ಟೆಂಬರ್ 19 ರ ಸಂಜೆ 5.30 ರೊಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ :  [email protected]  ವಿಳಾಸಕ್ಕೆ ಕಳುಹಿಸಬಹುದಾಗಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ