ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳು ಕಡ್ಡಾಯವಾಗಿ ಸರ್ಕಾರದ ನಿಯಮಾವಳಿಯಂತೆ ನೋಂದಾಯಿಸಿಕೊಳ್ಳಬೇಕು.
ವಿಕಲಚೇತನರ ಅಧಿನಿಯಮ 2016ರ ಸೆಕ್ಷನ್ 51 ಹಾಗೂ 52ರ ಅಡಿಯಲ್ಲಿ ಈ ನೋಂದಣಿ ಪ್ರಕ್ರಿಯೆ ಕಡ್ಡಾಯವಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದುವರೆಗೆ ನೋಂದಣಿಯಾಗದ ಸಂಸ್ಥೆಗಳು ತಕ್ಷಣವೇ ‘ಸೇವಾ ಸಿಂಧು’ ಪೋರ್ಟಲ್ ಮೂಲಕ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.



