ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಸವಾಲುಗಳನ್ನು ಎದುರಿಸಲು ಪೊಲೀಸ್ ಪಡೆಯನ್ನು ಸನ್ನದ್ಧಗೊಳಿಸುವ ಉದ್ದೇಶದಿಂದ, ರಾಜ್ಯ ಪೊಲೀಸ್ ಪಡೆಗಾಗಿ ರಾಷ್ಟ್ರೀಯ ಭದ್ರತಾ ಪಡೆ ಆಯೋಜಿಸಿರುವ ಬೃಹತ್ ಸಾಮರ್ಥ್ಯ ವರ್ಧನೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಶಾ ಪೆರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ತರಬೇತಿ ಶಿಬಿರವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಈ ವಿಶೇಷ ತರಬೇತಿಯು ರಾಜ್ಯ ಪೋಲೀಸ್ ಸಿಬ್ಬಂದಿಯ ಕಾರ್ಯಾಚರಣೆಯ ಸಾಮರ್ಥ್ಯ ಮತ್ತು ನೈಪುಣ್ಯತೆಯನ್ನು ಹೆಚ್ಚಿಸಲಿದ್ದು, ಉದ್ಭವಿಸುವ ಹೊಸ ಭದ್ರತಾ ಸವಾಲುಗಳನ್ನು ಎದುರಿಸಲು ನೆರವಾಗಲಿದೆ" ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬಿಡಿಎ ಅಧ್ಯಕ್ಷರು ಹಾಗೂ ಶಾಸಕ ಎನ್.ಎ. ಹ್ಯಾರಿಸ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಎನ್‌ಎಸ್‌ಜಿ ಮಹಾನಿರ್ದೇಶಕ ಭ್ರಿಗು ಶ್ರೀನಿವಾಸನ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.




