Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರಕ್ಕೆ ಭಾಜನರಾದ ಎಸ್.ವರಲಕ್ಷ್ಮಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ
ಅಂಗನವಾಡಿ ಕಾರ್ಯಕರ್ತೆಯರ ಸಂಘಟಕಿ, ಸಿಐಟಿಯು ನಾಯಕಿ ಎಸ್‌.ವರಲಕ್ಷ್ಮಿ ಅವರನ್ನು ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ಇಪ್ಪತ್ತೈದು ಸಾವಿರ ರೂ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಡಿಸೆಂಬರ್ ತಿಂಗಳಲ್ಲಿ ಚಿತ್ರದುರ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.



ರೈತ ಹೋರಾಟಗಾರ ಟಿ.ನುಲೇನೂರು ಶಂಕರಪ್ಪ ಅವರ ಹೆಸರಿನಲ್ಲಿ ಪ್ರತಿಷ್ಠಾನ ರಚಿಸಲಾಗಿದ್ದು ಸಾಮಾಜಿಕ, ರೈತ, ಕಾರ್ಮಿಕ ಹೋರಾಟಗಳಲ್ಲಿ ತೊಡಗಿಸಿಕೊಂಡವರಿಗೆ ರಾಜ್ಯಮಟ್ಟದಲ್ಲಿ ಪ್ರತಿ ವರ್ಷ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.


ಪ್ರಥಮದಲ್ಲಿ ಮಹಿಳಾ ಹೋರಾಟಗಾರ್ತಿಗೆ  ಪ್ರಶಸ್ತಿ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ಪ್ರತಿಷ್ಠಾನದ ಪರವಾಗಿ ಡಾ.ರವಿಶಂಕರ್ ನುಲೇನೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಎಸ್ ವರಲಕ್ಷ್ಮಿ ಅವರು ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ವೀರಕಪುತ್ರ ಗ್ರಾಮದವರು. ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಮಡಿಕೆ ತಯಾರಿಕೆ ಅವರ ಕುಟುಂಬದ ಕುಲಕಸುಬು. ಒಂದು ಹೊತ್ತಿನ ಊಟಕ್ಕೂ ಇಡೀ ಕುಟುಂಬ ದುಡಿಯಬೇಕಾಗಿದ್ದ ಸ್ಥಿತಿಯ ಕಾರಣ ಪದವಿ ವಿದ್ಯಾಭ್ಯಾಸ ಗಗನಕುಸುಮವಾಗಿತ್ತು. ಚೆನ್ನಾಗಿ ಓದಿ ಅಪ್ಪ-ಅಮ್ಮನ ಕಷ್ಟ ನಿವಾರಿಸಬೇಕೆಂದುಕೊಂಡಿದ್ದ  ವರಲಕ್ಷ್ಮಿ ಅವರ ಕನಸು ನನಸಾಗಲಿಲ್ಲ. ಆದರೆ, ಬಡತನವನ್ನು ಮೀರಬೇಕೆಂಬ ಮಹತ್ವಾಕಾಂಕ್ಷೆ, ಛಲ ಅವರನ್ನು ದಿಟ್ಟ ಹೋರಾಟಗಾರ್ತಿಯಾಗಿ ರೂಪಿಸಿತು.


ಬರಗಾಲದ ಕಾರಣ ವರಲಕ್ಷ್ಮಿ ಅವರ ಕುಟುಂಬವು ತಾಯಿಯವರ ತವರುಮನೆ ಬೆಂಗಳೂರಿನ ಕುಂಬಳುಗೋಡಿಗೆ ಬಂದು ನೆಲೆಸಿತು. ಹಣದ ತೊಂದರೆ ಇದ್ದ ಕಾರಣ ವರಲಕ್ಷ್ಮಿ ಅವರು ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆ ಸೇರಿದ್ದರು.
ಅಲ್ಲಿಂದ ಯೂನಿಯನ್‌ ಸಂಪರ್ಕಕ್ಕೆ ಬಂದರು.  ನಾನಾ ಹೋರಾಟಗಳಲ್ಲಿ ಭಾಗಿಯಾದ ಅವರು ಜೈಲುವಾಸವನ್ನೂ ಅನುಭವಿಸಿದರು. ಕೆಲಸ ಬಿಟ್ಟು ಪೂರ್ಣಾವಧಿಗೆ ಚಳವಳಿಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದರು. ಅಂಗನವಾಡಿ ಕಾರ್ಯಕರ್ತೆಯರನ್ನು ಸಂಘಟಿಸುವ ಜವಾಬ್ದಾರಿ ಹೊತ್ತರು.
40 ಸಾವಿರ ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಗೌರವಧನ ಹೆಚ್ಚಳಕ್ಕೆ ಹೋರಾಡಿ ಯಶಸ್ಸು ಕಂಡಿದ್ದು ಮರೆಯಲಾಗದ ಸಾಧನೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು