ಚಂದ್ರವಳ್ಳಿ ನ್ಯೂಸ್, ಹಿರಿಯೂರು: ತಾಲ್ಲೂಕಿನ ಹುಚ್ಚವ್ವನಹಳ್ಳಿ ನಿವಾಸಿಯಾದ ಹಿರಿಯ ನಾಗರಿಕ ಡಿ.ಸಣ್ಣಪ್ಪ (56) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಭಾನುವಾರ ಮುಂಜಾನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸುದೀರ್ಘ ಕಾಲದಿಂದ ಸರ್ಕಾರಿ ನ್ಯಾಯಬೆಲೆ ಅಂಗಡಿಯನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಬರುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಅಪಾರ ಸಂಖ್ಯೆಯ ಬಂಧು-ಮಿತ್ರರನ್ನು ಅಗಲಿದ್ದಾರೆ.
ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ:
ಡಿ.ಸಣ್ಣಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಹುಚ್ಚವ್ವನಹಳ್ಳಿಗೆ ತರಲಾಗಿದ್ದು, ಭಾನುವಾರ ಸಂಜೆಯೇ ಸಕಲ ವಿಧಿವಿಧಾನಗಳೊಂದಿಗೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಮೃತರ ಕುಟುಂಬದ ಮೂಲಗಳು ತಿಳಿಸಿವೆ. ಡಿ.ಸಣ್ಣಪ್ಪ ಅವರ ನಿಧನಕ್ಕೆ ಗ್ರಾಮಸ್ಥರು ತೀವ್ರ ಕಂಬನಿ ಮಿಡಿದಿದ್ದಾರೆ.



