ಚಂದ್ರವಳ್ಳಿ ನ್ಯೂಸ್ ಹೊಳೆನರಸೀಪುರ:
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಐತಿಹಾಸಿಕ ಮಾವಿನಕೆರೆ ಶ್ರೀ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನ ಪುಣ್ಯಭೂಮಿಯಲ್ಲಿ ಅಜ್ಜಿಯವರ ಸಮಾಧಿಗೆ ಹಾಲು-ತುಪ್ಪ ಸಮರ್ಪಿಸುವ ಧಾರ್ಮಿಕ ಕಾರ್ಯಕ್ರಮವು ಅತ್ಯಂತ ಶ್ರದ್ಧಾಭಕ್ತಿ ಮತ್ತು ಸಡಗರದಿಂದ ನೆರವೇರಿತು.
ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರ ಮಾರ್ಗದರ್ಶನದಲ್ಲಿ ಸಮಸ್ತ ಕುಟುಂಬದ ಸದಸ್ಯರು ಒಟ್ಟಾಗಿ ಧಾರ್ಮಿಕ ವಿಧಿ-ವಿಧಾನಗಳನ್ನು ಪೂರೈಸಿ, ಅಗಲಿದ ಅಜ್ಜಿಯವರ ಆತ್ಮಕ್ಕೆ ಶಾಂತಿ ಕೋರಿ ನಮನ ಸಲ್ಲಿಸಿದರು.
ಈ ಭಾವನಾತ್ಮಕ ಹಾಗೂ ಧಾರ್ಮಿಕ ಕ್ಷಣಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಪಕ್ಷದ ಪ್ರಮುಖ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಗೂ ಸಾರ್ವಜನಿಕ ಬಂಧುಗಳು ಸಾಕ್ಷಿಯಾದರು. ಸಮಾಧಿಗೆ ಪುಷ್ಪನಮನ ಸಲ್ಲಿಸಿದ ಹಿತೈಷಿಗಳು ಅಜ್ಜಿಯವರ ಸ್ಮರಣೆ ಮಾಡಿದರು.



