Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಏ.13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಭೇಟಿ

ಚಂದ್ರವಳ್ಳಿ ನ್ಯೂಸ್, ನರಸಿಂಹರಾಜಪುರ:
ತಾಲ್ಲೂಕು ಕೇಂದ್ರಕ್ಕೆ ಏ.13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದು ಈ ಕಾರ್ಯಕ್ರಮ‌ಕ್ಕೆ ಕಾಂಗ್ರೆಸ್ ಪಕ್ಷದಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹಾಗೂ ಭದ್ರಾಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಹೇಳಿದರು.


ತಾಲ್ಲೂಕು ಕಾಂಗ್ರೆಸ್ ಘಟಕದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಂದು ವಿಧಾನ ಪರಿಷತ್ ಸದಸ್ಯರಾಗಿದ್ದ ಹಾಲಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಅವರ ಮನವಿ ಮೇರೆಗೆ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ಮಾಡಿದ್ದ ತಾಲ್ಲೂಕು ಕೇಂದ್ರದಿಂದ ಹೊನ್ನೆಕೂಡಿಗೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಭದ್ರಾಹಿನ್ನೀರಿಗೆ ನಿರ್ಮಿಸಿರುವ ನೂತನ ಸೇತುವೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಇದು ಮುಖ್ಯಮಂತ್ರಿಗಳು ತಾಲ್ಲೂಕಿಗೆ ಕೊಟ್ಟಂತಹ ಪ‍್ರಮುಖ ಕೊಡುಗೆಯಾಗಿದೆ ಎಂದರು. ಅದೇ ರೀತಿ ರಾಜ್ಯ ‍ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಅವರ ಪ್ರಯತ್ನದಿಂದ  ನರಸಿಂಹರಾಜಪುರ ಪಟ್ಟಣಕ್ಕೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಪರಿಹಾರ ನೀಡಿ ರಸ್ತೆ  ಅಗಲೀಕರಣ ₹60 ಕೋಟಿ ಅನುದಾನ ಬಿಡುಗಡೆ ಮಾಡಿರುವ ಮುಖ್ಯಮಂತ್ರಿಗಳು ಸದರಿ ರಸ್ತೆ ವಿಸ್ತರಣೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಈ ಕಾರ್ಯಕ್ರಮ ತಾಲ್ಲೂಕಿನ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುವ ಕಾರ್ಯಕ್ರಮವಾಗಿದೆ ಎಂದರು. ಶಾಸಕ ಟಿ.ಡಿ.ರಾಜೇಗೌಡರು ಸಹ ಹಲವು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನಾ ನೀಡಿದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ. ಪಂಚಗ್ಯಾರಂಟಿಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಕಾರ್ಯಕ್ರಮಗಳನ್ನು  ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸಲಾಗಿದೆ. ಎಲ್ಲಾ ಫಲಾನುಭವಿಗಳ ಪರವಾಗಿ ಮುಖ್ಯಮಂತ್ರಿಗಳನ್ನು ಅಭಿನಂದಿಸಲಾಗುವುದು ಎಂದರು.

ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಶಾಸಕರ ಪ್ರಯತ್ನದಿಂದ ಸರ್ಕಾರ  ಕ್ಷೇತ್ರದ ವ್ಯಾಪ್ತಿಯ ಬಹುತೇಕ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಶಿಕ್ಷಣಕ್ಕೆ ಆದ್ಯತೆ ನೀಡುವಲ್ಲಿ ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಿದೆ.ರಸ್ತೆಗಳ ಅಭಿವೃದ್ಧಿಗೆ ಅನುದಾನಗಳನ್ನು ಸಹ ನೀಡಿದೆ ಎಂದರು. ಕೃಷಿಗೆ ನಿರಂತರ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಸೋಲಾರ್ ಇಂಧನ ಉತ್ಪಾದನೆಯಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ಇಂಧನ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ಕೈಗೊಂಡಿದ್ದ ಪ್ರಗತಿಯನ್ನು ಹಾಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ನಿರಂತರ ಪರಿಶ್ರಮದ ಫಲವಾಗಿ ವಿದ್ಯುತ್ ಉತ್ಪಾದನೆ ಹೆಚ್ಚಾಗಿದ್ದಿ  ನಿರಂತರ ವಿದ್ಯುತ್ ಪೂರೈಸುವ ಕಾರ್ಯ ಮಾಡಲಾಗುತ್ತಿದೆ. ಮಲೆನಾಡು ಭಾಗದಲ್ಲಿರುವ ಮಾನವ ಪ್ರಾಣಿ ಸಂಘರ್ಷ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆಅವರು ಶಾಸಕರ ಮನವಿ ಮೇರೆಗೆ ಕ್ಷೇತ್ರಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಮನವಿ ಮೇರೆಗೆ ಕಂದಾಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಗಿದೆ. ಮುಖ್ಯಮಂತ್ರಿಗಳು ಮಾನವ ಪ್ರಾಣಿ ಸಂಘರ್ಷಕ್ಕೆ ಶಾಶ್ವತವಾಗಿ  ಸಮಸ್ಯೆ ಬಗೆಹರಿಸಲು ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿದ್ದಾರೆ ಎಂದರು.

ಏ.13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ, ಜಿಲ್ಲೆಯ ಎಲ್ಲಾ ಶಾಸಕರು ಆಗಮಿಸಲಿದ್ದಾರೆ ಎಂದರು.  

ಮುಖ್ಯಮಂತ್ರಿಗಳ ಭೇಟಿ ಕಾರ್ಯಕ್ರಮ ಹಬ್ಬದ ವಾತಾವರಣವಾಗಲಿದ್ದು ಕ್ಷೇತ್ರದ ಎಲ್ಲಾ ಬೂತ್ ಗಳಿಂದಲೂ ಮುಖಂಡುರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ರಸ್ತೆ ಅಗಲೀಕರಣಕ್ಕೆ ಶಂಕುಸ್ಥಾಪನೆ, ಸೇತುವೆ ಉದ್ಘಾಟನೆ, ಮತ್ತಿತರ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಐತಿಹಾಸಕಿ ಕ್ಷಣಕ್ಕೆ ಸಾಕ್ಷಿಯಾಗಲಿದೆ ಎಂದರು.

 ಕೊಪ್ಪ ಎಪಿಎಂಸಿ ಅಧ್ಯಕ್ಷ ಎಸ್.ಡಿ.ರಾಜೇಂದ್ರ, ತಾಲ್ಲೂಕು ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಉಪಾಧ್ಯಕ್ಷ ಬೆನ್ನಿ, ನಗರ ಘಟಕದ ಅಧ್ಯಕ್ಷ ಶ್ರೀಧರ್ ಪಾನಿ, ಬಗರ್ ಹುಕುಂ ಸಮಿತಿ ಅಧ್ಯಕ್ಷ ಈ.ಸಿ.ಜೋಯಿ, ಮುಖಂಡರಾದ ರಘುವೀರ್, ಪ್ರಶಾಂತ್ ಶೆಟ್ಟಿ, ನಂದೀಶ್, ಜುಬೇದಾ, ಸೈಯದ್ ವಸೀಂ, ಅನಿದ್, ಎಚ್.ಎಂ.ಶಿವಣ್ಣ, ಮಣಿ,ಸಮೀರಾನಹೀಂ,ನಾಗಪ್ಪ, ಜಾನ್ ಇದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ