Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ : ಬಂಡಿ ಮೂಲಕ ಮೆರವಣಿಗೆ

Advertisement
Advertisement
ಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ : ಬಂಡಿ ಮೂಲಕ ಮೆರವಣಿಗೆ
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಾಲ್ಲೂಕಿನ ಸಾಸಲು ಹೋಬಳಿ‌‌ಕೇಂದ್ರದ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲಾ ಆವರಣದಲ್ಲಿ ಏ.19 ರಂದು ಭಾನುವಾರ ಸಾಸಲು ಚಿನ್ನಮ್ಮ ಉತ್ಸವ ನಡೆಯಲಿದೆ. ಸಾಸಲು ಹೋಬಳಿ‌ಚಿನ್ನಮ್ಮ ಉತ್ಸವ ಸಮಿತಿ ವತಿಯಿಂದ ಮೊದಲ ಬಾರಿಗೆ ನಡೆಯುತ್ತಿರುವ ಸಾಸಲು ಚಿನ್ನಮ್ಮ ಉತ್ಸವ-2026 ಕಾರ್ಯಕ್ರಮವನ್ನು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ಡಿ.ಕೆ.ಚಿತ್ತಯ್ಯ ಪೂಜಾರ್ ಉದ್ಘಾಟಿಸಲಿದ್ದಾರೆ ಎಂದು ತಾ.ಪಂ ಮಾಜಿ ಅಧ್ಯಕ್ಷ ಲಾವಣ್ಯ ನಾಗರಾಜ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಾಸಲು ಚಿನ್ನಮ್ಮ ಉತ್ಸವ ಏ.19ರ ಬೆಳಗ್ಗೆ 8 ಗಂಟೆಗೆ ಸಾದ್ವಿಮಣೆ ಸಾಸಲು ಚಿನ್ನಮ್ಮ ದೇವಾಲಯ ಮುಂಭಾಗದಿಂದ ಡಾ.ಬಿ.ಆರ್. ಅಂಬೇಡ್ಕರ್ ಪ್ರೌಢಶಾಲೆಯ ಸಾಸಲು ಚೆನ್ನಮ್ಮ ಉತ್ಸವ ವೇದಿಕೆ ತನಕ ಜಾನಪದ ಕಲಾ ತಂಡಗಳೊಂದಿಗೆ ಸಾಸಲು ಚಿನ್ನಮ್ಮ ಮೂರ್ತಿಯನ್ನು ಚಿಲಕಲ ಬಂಡಿ ಮೂಲಕ ಮೆರವಣಿಗೆ ನಡೆಯುತ್ತದೆ ಎಂದರು.

ಸಾಸಲು ಚಿನ್ನಮ್ಮ ಉತ್ಸವದ ಮುಖ್ಯ ವೇದಿಕೆಯಲ್ಲಿಬಜಾನಪದ ವಿದ್ವಾಂಸರಾದ ಸಣ್ಣ ನಾಗಪ್ಪನವರಿಂದ ಸಾಸಲು ಚಿನ್ನಮ್ಮ ಪರಿಚಯದ ಕಿರುಪುಸ್ತಕ ಬಿಡುಗಡೆ ಮಾಡುತ್ತಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಧೀರಾಜ್ ಮುನಿರಾಜು, ಶಾಸಕರು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಕಿಮ್ಸ್ ಆಸ್ಪತ್ರೆ ಮಾಜಿ ಅಧ್ಯಕ್ಷರಾದ ಬಿ. ಮುನೇಗೌಡ ಭಾಗವಹಿಸುವರು. ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿರುತ್ತದೆ. ಸಾಸಲು ಹೋಬಳಿ ಕುರಿತು ಚಿಂತನ-ಮಂಥನ ವಿಚಾರಗೋಷ್ಠಿ , ರಾತ್ರಿ 7 ಗಂಟೆಗೆ ಸಾಸಲು ಚೆನ್ನಮ್ಮ ಕುರಿತ ನಾಟಕ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಾಸಲು ಹೋಬಳಿ ಕಸಾಪ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು, ಸಾಸಲು ಚಿನ್ನಮ್ಮ ಉತ್ಸವ ಸಮಿತಿಯ ಮುಖಂಡರುಗಳಾದ ವಕೀಲರಾದ ನರಸಿಂಹಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಗ್ರಾಮಪಂಚಾಯಿತಿ ಸದಸ್ಯ ಪಚ್ಚಾರಹಳ್ಳಿ ರಮೇಶ್, ಉಪನ್ಯಾಸಕ ಕೇಶವಮೂರ್ತಿ, ಚಂದ್ರಶೇಖರ್ ಮುಂತಾದವರು ಭಾಗವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಫೂರ್ತಿ ಕನ್ನಡ ಕಲಾ ಟ್ರಸ್ಟ್ ವತಿಯಿಂದ 'ಕಣ್ಣು ತರೆಸಿದ ಹಣ್ಣು'ಕಾರ್ಯಕ್ರಮಹುಟ್ಟು ಹಬ್ಬಗಳನ್ನು ಸಮಾಜ ಮುಖಿ ಕಾರ್ಯಗಳೊಂದಿಗೆ ಆಚರಿಸಿ- ಮುನಿಕೃಷ್ಣಪ್ಪಸರ್ಕಾರಿ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮಮುಂಗಾರು ಹಾನಿ ತಡೆಗೆ ಜಿಲ್ಲಾಡಳಿತ ಹೈ ಅಲರ್ಟ್; ಸಾರ್ವಜನಿಕರ ನೆರವಿಗಾಗಿ 5 ತುರ್ತು ಸ್ಪಂದನಾ ತಂಡಗಳ ರಚನೆಐಪಿಎಲ್ ಫೈನಲ್ ಸ್ಥಳಾಂತರ ವಿವಾದ: ಬೆಂಗಳೂರಿನ ಯುವಕರಿಗೆ ಅನ್ಯಾಯ ಎಂದ ಡಿ.ಕೆ ಶಿವಕುಮಾರ್ಭಾರಿ ಸಂಚಲನ ಸೃಷ್ಟಿಸಿದ ಜಮೀರ್ ಅವರ ಆಡಿಯೋಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ-ಜೈರಾಮ್ ರಮೇಶ್ನೂತನ ಸಿಎಂ ಶಿವಕುಮಾರ್-ನಿರ್ಗಮಿತ ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿಕೇಸರಿ ಶಾಲು ಬೇಕೋ, ರಾಷ್ಟ್ರಧ್ವಜ ಬೇಕೋ ಆಮೇಲೆ ಚರ್ಚಿಸೋಣಹಿರಿಯೂರು ನಗರಸಭೆಯಲ್ಲಿ 'ಪಿಎಂ ಸ್ವನಿಧಿ' ಲೋಕ ಕಲ್ಯಾಣ ಮೇಳ: ಬೀದಿ ಬದಿ ವ್ಯಾಪಾರಿಗಳಿಗೆ ಸಾಲದ ಅರ್ಜಿ ವಿತರಣೆ