Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫೆ.22 ಮತ್ತು 23 ರಂದು ಸರಿಗಮ ಸಂಗೀತ ನಾಟಕೋತ್ಸವ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಗಾನಯೋಗಿ ಪಂಡಿತ ಪಂಚಾಕ್ಷರ ಗವಾಯಿಗಳವರ ಜಯಂತ್ಯೋತ್ಸವ ಅಂಗವಾಗಿ ಫೆ.೨೨ ಮತ್ತು ೨೩ ರಂದು ತ.ರಾ.ಸು.ರಂಗಮಂದಿರದಲ್ಲಿ ಪ್ರಥಮ ಬಾರಿಗೆ ಕುಮಾರೇಶ್ವರ ಕೃಪಾ ಪೋಷಿತ ಪಂಡಿತ ಪಂಚಾಕ್ಷರ ಗವಾಯಿಗಳವರ ನಾಟ್ಯ ಸಂಘ ಗದಗ ವತಿಯಿಂದ ಸರಿಗಮ ಸಂಗೀತ ನಾಟಕೋತ್ಸವ ನಡೆಯಲಿದೆ ಎಂದು ನಾಟಕೋತ್ಸವ ಸಮಿತಿ ಕಾರ್ಯದರ್ಶಿ ಸುಜೀತ ಕುಲಕರ್ಣಿ ತಿಳಿಸಿದರು.


ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಸಂಸ್ಥೆ ಆರಂಭವಾಗಿ ನಾಲ್ಕು ವರ್ಷಗಳಾಗಿದೆ. ತಬಲ, ವಾದ್ಯ, ಹಾರ್ಮೋನಿಯಂ ಕಲಿಸುತ್ತಿದ್ದೇವೆ. ನಾಟಕದಲ್ಲಿ ಸ್ತೀ ಪಾತ್ರವನ್ನು ಪುರುಷರು ಅಭಿನಯಿಸುತ್ತಿರುವುದು ವಿಶೇಷ. ಮೊದಲ ದಿನ ಹೇಮರಡ್ಡಿ ಮಲ್ಲಮ್ಮ, ಎರಡನೆ ದಿನ ಅಕ್ಕ ಅಂಗಾರ ತಂಗಿ ಬಂಗಾರ ನಾಟಕ ಸಂಜೆ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.

ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಭಾ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ರಂಗಕರ್ಮಿ ರಾಜ್ಯ ಪ್ರಶಸ್ತಿ ಪುರಸ್ಕೃತ ಕೆ.ಪಿ.ಭೂತಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಉದ್ಯಮಿ ಸೈಟ್ ಬಾಬಣ್ಣ ಇವರುಗಳು ಭಾಗವಹಿಸಲಿದ್ದಾರೆಂದರು.

ಸಮಾರೋಪ ಸಮಾರಂಭದ ಸಾನಿಧ್ಯವನ್ನು ಮುರುಘರಾಜೇಂದ್ರ ಬೃಹನ್ಮಠದ ಡಾ.ಬಸವಕುಮಾರ ಮಹಾಸ್ವಾಮೀಜಿ ವಹಿಸಲಿದ್ದಾರೆ. ಸಂಗೀತದ ಆಸಕ್ತಿಯಳ್ಳವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಂಗೀತ ನಾಟಕೋತ್ಸವ ಯಶಸ್ವಿಗೊಳಿಸುವಂತೆ ಸುಜೀತ ಕುಲಕರ್ಣಿ ಮನವಿ ಮಾಡಿದರು.

ಸರಿಗಮ ಸಂಗೀತ ನಾಟಕೋತ್ಸವ ಸಮಿತಿ ಅಧ್ಯಕ್ಷ ಸತ್ಯನಾರಾಯಣರೆಡ್ಡಿ ಮಾತನಾಡಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಎರಡು ನಾಟಕಗಳು ಪ್ರದರ್ಶನಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರಂಗಾಸಕ್ತರು ವೀಕ್ಷಿಸಿ ಕಲಾವಿದರನ್ನು ಪ್ರೋತ್ಸಾಹಿಸಿ ಕಲೆಯನ್ನು ಉಳಿಸಿ ಬೆಳೆಸುವಂತೆ ವಿನಂತಿಸಿದರು.

ಸರಿಗಮ ಸಂಗೀತ ನಾಟಕೋತ್ಸವ ಸಮಿತಿ ಉಪಾಧ್ಯಕ್ಷೆ ಡಾ.ಭವ್ಯರಾಣಿ ಟಿ. ಮಂಜುನಾಥ್ ಸಿ. ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ