ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಸವಕೇಂದ್ರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳು ಹಾಗೂ ಸಮಾಜಗಳ ಸಹಯೋಗದಲ್ಲಿ ರಂಗಾಯಣ ಶಿವಮೊಗ್ಗ ಪ್ರಸ್ತುತ ಪಡಿಸುವ ಬೊಳುವಾರು ಮಹಮ್ಮದ್ ಕುಂಞಿ ಅವರ ಕಾದಂಬರಿ ಆಧಾರಿತ “ಸ್ವಾತಂತ್ರ್ಯದ ಓಟ” ನಾಟಕ ಪ್ರದರ್ಶನವನ್ನು ಇದೇ ಜೂನ್ 29ರಂದು ಸಂಜೆ 6ಕ್ಕೆ ಚಿತ್ರದುರ್ಗ ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ಏರ್ಪಡಿಸಲಾಗಿದೆ.
ಇತ್ತೀಚೆಗೆ ನಿಧನರಾದ ಬಹುಮುಖ ವ್ಯಕ್ತಿತ್ವದ ಹಿರಿಯ ಪತ್ರಕರ್ತರಾದ ಲಿಂ. ಜಿ.ಎಸ್.ಉಜ್ಜನಪ್ಪ ಅವರ ನೆನಪಿನಲ್ಲಿ ನಾಟಕ ಪ್ರದರ್ಶನ ಹಾಗೂ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟನೆ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್, ಮಾಜಿ ಸಚಿವ ಹೆಚ್.ಆಂಜನೇಯ, ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಗುಡಸಿ, ಜಾನಪದ ವಿದ್ವಾಂಸ ಡಾ.ಕರಿಯಪ್ಪ ಮಾಳಿಗೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿನಾಯಕ ತೊಡರನಾಳ್ ಭಾಗವಹಿಸುವರು.
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮತ್ತು ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ, ಸದಸ್ಯರಾದ ಬಸವಕುಮಾರ ಸ್ವಾಮೀಜಿ, ಡಾ.ಪಿ.ಎಸ್.ಶಂಕರ್, ಎಸ್.ಎನ್.ಚಂದ್ರಶೇಖರ್, ಹಿರಿಯ ಸಾಹಿತಿ ಮೃತ್ಯುಂಜಯಪ್ಪ, ನಿವೃತ್ತ ಪ್ರಾಚಾರ್ಯ ಹಾಗೂ ಕಲಾವಿದ ಜಂಜುನಾಥ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.



