Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಆ.21 ರಂದು ಬೃಹತ್ ಸಮಾರೋಪ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ರಾಜ್ಯ ಮಟ್ಟದ ಸಮಾವೇಶದ ಪೋಸ್ಟರ್ ಅನ್ನು ನಗರದ ಭಗತ್ ಸಿಂಗ್ ಪಾರ್ಕ್ ಬಳಿ ಬಿಡುಗಡೆ


ಸರ್ಕಾರಿ ಶಾಲೆಗಳ ಮುಚ್ಚುವಿಕೆ ವಿರೋಧಿಸಿ 50 ಲಕ್ಷ ಸಹಿಗಳನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಎಐಡಿಎಸ್‍ಒ ಕರ್ನಾಟಕ ಸಿದ್ಧತೆ ಆಗಸ್ಟ್ 21 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ರಾಜ್ಯವ್ಯಾಪಿ ಚಳುವಳಿಯ ಸಮಾರೋಪ ಸಭೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

 ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು ಹೊರಟಿರುವುದನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಹಮ್ಮಿಕೊಂಡಿದ್ದ ಐತಿಹಾಸಿಕ 50 ಲಕ್ಷ ಸಹಿ ಸಂಗ್ರಹ ಅಭಿಯಾನವು ಯಶಸ್ವಿಯಾಗಿ ಪೂರ್ಣಗೊಂಡಿದೆ. "ಸರ್ಕಾರಿ ಶಾಲೆಗಳನ್ನು ಉಳಿಸಿ ಮತ್ತು ಬಲಪಡಿಸಿ" ಎಂಬ ಕರೆಯೊಂದಿಗೆ ಪ್ರಾರಂಭವಾದ ಈ ಅಭಿಯಾನವು ರಾಜ್ಯದ ಇತಿಹಾಸದಲ್ಲಿಯೇ ಅತಿದೊಡ್ಡ ವಿದ್ಯಾರ್ಥಿ ಚಳುವಳಿಗಳಲ್ಲಿ ಒಂದಾಗಿ ಹೊರಹೊಮ್ಮಿದೆ.

50,000 ಕ್ಕೂ ಹೆಚ್ಚು ಸ್ವಯಂಸೇವಕರು ರಾಜ್ಯಾದ್ಯಂತ ಈ ಅಭಿಯಾನದಲ್ಲಿ ಭಾಗವಹಿಸಿದ್ದು, ಪೋಷಕರು, ವಿದ್ಯಾರ್ಥಿಗಳು ಸ್ಥಳೀಯ ನಾಗರಿಕರ ಜೊತೆ ಸೇರಿ ನೂರಾರು ಪ್ರತಿಭಟನಾ ಸಭೆಗಳನ್ನು ನಡೆಸಿದ್ದಾರೆ. ಹಲವು ಜಿಲ್ಲೆಗಳಲ್ಲಿ, ಈ ಹೋರಾಟವು, ಅಧಿಕಾರಿಗಳು ಅನೇಕ ಶಾಲೆಗಳಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸುವಂತೆ ಮಾಡಿದೆ. ಅಲ್ಲದೆ, ಕರ್ನಾಟಕದಾದ್ಯಂತ ಹಲವಾರು ಶಿಕ್ಷಕರು, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಣ ತಜ್ಞರಿಂದ ಈ ಚಳುವಳಿಗೆ ಬೆಂಬಲ ವ್ಯಕ್ತವಾಗಿದೆ. ರಾಜ್ಯದ 30 ಜಿಲ್ಲೆಗಳ 150 ಕ್ಕೂ ಹೆಚ್ಚು ತಾಲೂಕುಗಳನ್ನು ಈ ಅಭಿಯಾನವು ತಲುಪಿದ್ದು, 1000 ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.

ಆಗಸ್ಟ್ 21, ಬೆಳಿಗ್ಗೆ 11, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಸಂಗ್ರಹಿಸಲಾದ ಸಹಿಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಬೃಹತ್ ಸಮಾರೋಪ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಔಪಚಾರಿಕವಾಗಿ ಸಲ್ಲಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು
, ಪೋಷಕರು, ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣದ ಹಿತೈಷಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ವಿವರಗಳು:


ಸಾಹಿತಿಗಳು ಮತ್ತು ಶಿಕ್ಷಣ ತಜ್ಞರಾದ ಬರಗೂರು ರಾಮಚಂದ್ರಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆ ಉದ್ಘಾಟಿಸಲಿದ್ದಾರೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಎ. ಮುರಿಗೆಪ್ಪ,  ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಟ ಕಿಶೋರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 


ಎಐಡಿಎಸ್‍ಒ ಕೇಂದ್ರ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಶಿಬಾಶಿಷ್ ಪ್ರಹರಾಜ್ ಮುಖ್ಯ ಭಾಷಣ ಮಾಡಲಿದ್ದಾರೆ. ಎಐಡಿಎಸ್‍ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಎಐಡಿಎಸ್‍ಒ ರಾಜ್ಯಾಧ್ಯಕ್ಷರೀದ ಅಶ್ವಿನಿ ಕೆ ಎಸ್ ಅಧ್ಯಕ್ಷತೆ ವಹಿಸಲಿದ್ದಾರೆ.

ಸರ್ಕಾರಿ ಶಾಲೆಗಳ ರಕ್ಷಣೆ ಮತ್ತು ಬಲವರ್ಧನೆಗಾಗಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಧ್ವನಿ ಎತ್ತಬೇಕೆಂದು ಎಐಡಿಎಸ್‍ಒ ಜಿಲ್ಲಾ ಸಂಚಾಲಕ ಕೆ.ಈರಣ್ಣ, ಸದಸ್ಯೆ ಎಂ.ಶಾಂತಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ