ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳಿಂದ 'ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (ಎಓಗಿSಖಿ)-2027' ರ ಆನ್‍ಲೈನ್ ನೋಂದಣಿ ಪೋರ್ಟಲ್ ಅನ್ನು ಅಧಿಕೃತವಾಗಿ ಪ್ರಾರಂಭಿಸಲಾಗಿದೆ.
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿಯ (NVS) ಅಧಿಕೃತ ವೆಬ್‍ಸೈಟ್ https://navodaya.gov.in ಮೂಲಕ ಜುಲೈ 31 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಪ್ರವೇಶಕ್ಕೆ ಸಂಬಂಧಿಸಿದ ಸಂಪೂರ್ಣ ಅರ್ಹತಾ ನಿಯಮಾವಳಿಗಳ ಮಾಹಿತಿಯು ವೆಬ್‍ಸೈಟ್‍ನ 'Admission Notifications' ಪುಟದಲ್ಲಿ ಲಭ್ಯವಿದ್ದು, ಸಾರ್ವಜನಿಕರು ಲಿಂಕ್ ಬಳಸಿ https://navodaya.gov.in/nvs/en/Admission-JNVST/Admission-Notifications/ ವೀಕ್ಷಿಸಬಹುದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



