Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕೆ.ಎಸ್.ಒ.ಯು.) 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದೆ.

ಪ್ರಥಮ ವರ್ಷದ ಕಲಾ ಪದವಿ (ಬಿ.ಎ), ವಾಣಿಜ್ಯಶಾಸ್ತ್ರ ಪದವಿ (ಬಿ.ಕಾಂ), ವಿಜ್ಞಾನ ಪದವಿ (ಬಿ.ಎಸ್ಸಿ), ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಪದವಿ (ಬಿ.ಲಿಬ್.ಐ.ಎಸ್ಸಿ), ಗಣಕ ಅನ್ವಯಿಕ ಪದವಿ (ಬಿಸಿಎ), ವ್ಯವಹಾರ ಆಡಳಿತ ಪದವಿ (ಬಿಬಿಎ), ಸಮಾಜ ಕಾರ್ಯ ಪದವಿ (ಬಿ.ಎಸ್.ಡಬ್ಲ್ಯೂ) ಹಾಗೂ ಸ್ನಾತಕೋತ್ತರ ಪದವಿಗಳಾದ ಕಲಾ ಸ್ನಾತಕೋತ್ತರ (ಎಂ.ಎ), ವಾಣಿಜ್ಯಶಾಸ್ತ್ರ ಸ್ನಾತಕೋತ್ತರ (ಎಂ.ಕಾಂ), ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ (ಎಂ.ಎ-ಎಂ.ಸಿ.ಜೆ), ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಸ್ನಾತಕೋತ್ತರ (ಎಂ.ಲಿಬ್.ಐ.ಎಸ್ಸಿ), ವ್ಯವಹಾರ ಆಡಳಿತ ಸ್ನಾತಕೋತ್ತರ (ಎಂಬಿಎ), ವಿಜ್ಞಾನ ಸ್ನಾತಕೋತ್ತರ (ಎಂ.ಎಸ್ಸಿ), ಗಣಕ ಅನ್ವಯಿಕ ಸ್ನಾತಕೋತ್ತರ (ಎಂಸಿಎ), ಸಮಾಜ ಕಾರ್ಯ ಸ್ನಾತಕೋತ್ತರ (ಎಂ.ಎಸ್.ಡಬ್ಲ್ಯೂ) ಕೋರ್ಸ್‌ಗಳು ಸೇರಿದಂತೆ ವಿವಿಧ ಪಿಜಿ ಡಿಪ್ಲೋಮಾ, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Advertisement

ಆಸಕ್ತ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ಆನ್‌ಲೈನ್ ಅಡ್ಮಿಷನ್ ಪೋರ್ಟಲ್ https://ksouportal.com/views/StudentHome.aspx ನಲ್ಲಿ ಆನ್‌ಲೈನ್ ಮೂಲಕ ಪ್ರವೇಶಾತಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ, ಕೆ.ಎಸ್.ಆರ್.ಟಿ.ಸಿ. ನೌಕರರುಗಳಿಗೆ ನಿಯಮಾನುಸಾರ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ.ಕೋವಿಡ್-19 ರಿಂದ ಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ ಹಾಗೂ ಶೇಕಡ 50ಕ್ಕೂ ಹೆಚ್ಚಿನ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ (ಬಿ.ಇಡಿ ಮತ್ತು ಎಂಬಿಎ ಕೋರ್ಸ್‌ಗಳನ್ನು ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ವಿದ್ಯಾರ್ಥಿಗಳು ಏಕಕಾಲದಲ್ಲಿ  ರೆಗ್ಯುಲರ್ ಹಾಗೂ ದೂರಶಿಕ್ಷಣ ಕ್ರಮದಲ್ಲಿ ಕೋರ್ಸ್ ಕಲಿಯಲು ಅವಕಾಶವಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಅಧಿಕೃತ ವೆಬ್‌ಸೈಟ್: www.ksoumysuru.ac.in ಮೊಬೈಲ್ ಸಂಖ್ಯೆಗಳಾದ 9738014893, 7204352581, 9008905457, 8310111244, 9972499704, 7090762378 ಕರೆ ಮಾಡಬಹದು. ಪ್ರಾದೇಶಿಕ  ಕಚೇರಿಯನ್ನು ಸಂಪರ್ಕಿಸುವುದು ಎಂದು ಚಿತ್ರದುರ್ಗ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ. ಕೆ.ಪಿ. ಮಹಾಲಿಂಗಯ್ಯ ಅವರು ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ