Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಅಗ್ನಿವೀರ್ ನೇಮಕಾತಿಗಾಗಿ ಆನ್‍ಲೈನ್ ನೋಂದಣಿ ಪ್ರಾರಂಭ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತೀಯ ಸೇನೆಯು
2027ರ ನೇಮಕಾತಿ ವರ್ಷಕ್ಕಾಗಿ ಅಗ್ನಿಪಥ್ ಯೋಜನೆಯಡಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಅಇಇ) ಆನ್‍ಲೈನ್ ನೋಂದಣಿಯನ್ನು ಅಧಿಕೃತವಾಗಿ ಘೋಷಿಸಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ನೋಂದಣಿ ಅವಧಿಯು 13 ಫೆಬ್ರವರಿ 2026 ರಿಂದ 01 ಏಪ್ರಿಲ್ 2026 ರವರೆಗೆ ನಡೆಯಲಿದೆ. ಲಭ್ಯವಿರುವ ವಿಭಾಗಗಳು: ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್/ಸ್ಟೋರ್ ಕೀಪರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‍ಮನ್ (10ನೇ ಮತ್ತು 8ನೇ ತೇರ್ಗಡೆ), ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್), ನರ್ಸಿಂಗ್ ಅಸಿಸ್ಟೆಂಟ್ ಮತ್ತು ನರ್ಸಿಂಗ್ ಅಸಿಸ್ಟೆಂಟ್ ವೆಟರಿನರಿ, ಸಿಪಾಯಿ ಫಾರ್ಮಾ.

ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‍ಸೈಟ್ www.joinindianarmy.nic.in ನಲ್ಲಿ  ನೋಂದಾಯಿಸಿಕೊಳ್ಳಬಹುದು.

ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇತರ ಮಾನದಂಡಗಳ ಬಗ್ಗೆ ವಿವರವಾದ ಮಾಹಿತಿಯು ವೆಬ್‍ಸೈಟ್‍ನಲ್ಲಿ ಲಭ್ಯವಿದೆ. 

ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆಗಳಿದ್ದಲ್ಲಿ, ಅಭ್ಯರ್ಥಿಗಳು ನೇಮಕಾತಿ ಕಚೇರಿ ಬೆಂಗಳೂರು: 080-29516517 / 7996672666, ಪ್ರಾದೇಶಿಕ ನೇಮಕಾತಿ ಕಚೇರಿ ಮಂಗಳೂರು: 082-42951276 / 7411497644, ಪ್ರಾದೇಶಿಕ ನೇಮಕಾತಿ ಕಚೇರಿ ಬೆಳಗಾವಿ: 0831-2950001 / 7411048362 ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ