Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ತೆರೆದ ಮನೆ ಕಾರ್ಯಕ್ರಮ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಗ್ರಾಮಾಂತರ ಪೊಲೀಸ್ ಠಾಣೆ
, ಮಹಿಳಾ ಪೊಲೀಸ್ ಠಾಣೆ ಹಾಗೂ ಯುವ ಸಂಚಲನ ಚಾರಿಟಬಲ್ ಟ್ರಸ್ಟ್ ವತಿಯಿಂದ ಚೈಲ್ಡ್ ರೈಟ್ಸ್ ಟ್ರಸ್ಟ್‌ಹಾಗೂ ಸರ್ಕಾರಿ ಪ್ರೌಢಶಾಲೆ ಅರಳುಮಲ್ಲಿಗೆ ಬಾಗಿಲು ಸಹಯೋಗದಲ್ಲಿ 'ತೆರೆದ ಮನೆ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪೊಲೀಸ್ ಠಾಣೆಗೆ ಆಗಮಿಸಿದ್ದ ವಿದ್ಯಾರ್ಥಿಗಳು ಪೊಲೀಸ್ ಠಾಣೆಯ ಕಾರ್ಯಚಟುವಟಿಕೆಗಳು ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ಪಡೆದರು.

ಯುವ ಸಂಚಲನ ಚಾರಿಟೇಬಲ್‌ಟ್ರಸ್ಟ್ ಹಾಗೂ ಚೈಲ್ಡ್ ರೈಟ್ಸ್ ಟ್ರಸ್ಟ್ ಇವರುಗಳ ಸಹಯೋಗದಲ್ಲಿ ನಡೆಯುತ್ತಿರುವ ಎಲ್ಲಾ ಮಕ್ಕಳಿಗೂ, ಎಲ್ಲಾ ಹಕ್ಕುಗಳು (ಹಕ್ಕಿನೊಂದಿಗೆ ಜವಾಬ್ದಾರಿ) ಅಭಿಯಾನದಡಿ ಮಕ್ಕಳ ಬದುಕು, ರಕ್ಷಣೆ, ಅಭಿವೃದ್ಧಿ ಹಾಗೂ ಭಾಗವಹಿಸುವಿಕೆಯ ಹಕ್ಕುಗಳನ್ನು ಎಲ್ಲರಿಗೂ ತಲುಪಿಸಲು ಹಾಗೂ ಮಕ್ಕಳಿಗಾಗಿ ಇರುವ ಕಾರ್ಯ ಕ್ರಮಗಳು ಮತ್ತು ಯೋಜನೆ ಗಳು ತಲುಪುವಂತೆ ಮಾಡುವುದು ಮತ್ತು ಮಕ್ಕಳ ಹಕ್ಕುಗಳ ಜಾಗೃತಿ ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಎಂದು ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಚಿದಾನಂದಮೂರ್ತಿ ತಿಳಿಸಿದರು.

 ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಾಧಿಕ್ ಪಾಷಾ, ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಡಾ.ನವೀನ್ ಕುಮಾರ್ ಮಕ್ಕಳ ಮೇಲಿನ ದೌರ್ಜನ್ಯ, ಬಾಲಕಾರ್ಮಿಕ ಬಾಲ್ಯವಿವಾಹ, ಮಕ್ಕಳ ಆಪ ಹರಣ, ಪೋಕೋ, ಮಕ್ಕಳ ನ್ಯಾಯ, ಮಕ್ಕಳ ಸಹಾಯವಾಣಿ ಸಂಖ್ಯೆ, ಮಕ್ಕಳ ಸುರಕ್ಷತಾ ಕ್ರಮಗಳು ಮುಂತಾದ ಕಾನೂನು ಸಂಬಂಧಿತ ವಿಷಯಗಳನ್ನು ಸರಳ ಭಾಷೆಯಲ್ಲಿ ಉದಾಹರಣೆಗಳ ಮುಖಾಂತರ ಮಕ್ಕಳಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ರೇವಣ್ಣ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಮಹಿಳಾ ಪೊಲೀಸ್ ಠಾಣೆಯ ಎಲ್ಲಾ ಆರಕ್ಷಕರು, ಸಿಬ್ಬಂದಿ ವರ್ಗದವರು, ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯಿನಿ ಸರೋಜಾ ನಾಯಕ್, ಶಿಕ್ಷಕ ಎಚ್. ಎನ್.ಪ್ರಕಾಶ್, ಸ್ವಾಮಿ ಯುವ ಸಂಚಲನದ ಸಂಚಾಲಕ ನವೀನ್ ಹಾಗೂ ಸ್ವಯಂ ಸೇವಕರಾದ ಕಿರಣ್, ರತ್ನ, ಕೀರ್ತಿ, ಲಾವಣ್ಯ ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ