ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2026-27ನೇ ಶೈಕ್ಷಣಿಕ ಸಾಲಿಗೆ ಜುಲೈ ಆವೃತ್ತಿ ಪ್ರವೇಶಾತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸ್ನಾತಕ ಕೋರ್ಸ್‍ಗಳಾದ ಬಿ.ಎ, ಬಿ.ಕಾಂ, ಬಿ.ಎಸ್.ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಲಿಬ್.ಐ.ಎಸ್.ಸಿ, ಸ್ನಾತಕೋತ್ತರ ಕೋರ್ಸ್‍ಗಳಾದ ಎಂ.ಎ, ಎಂ.ಕಾಂ., ಎಂ.ಎಸ್.ಸಿ., ಎಂ.ಬಿ.ಎ., ಎಂ.ಲಿಬ್.ಐ.ಎಸ್.ಸಿ, ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ, ಸರ್ಟಿಫಿಕೇಟ್, ಡಿಪ್ಲೋಮಾ, ಮತ್ತು ಸ್ನಾತಕ ಪೂರ್ವ ಸರ್ಟಿಫಿಕೇಟ್ ಶಿಕ್ಷಣಗಳಿಗೆ ಜೂನ್ 30 ರಿಂದ ಪ್ರವೇಶಾತಿ ಪ್ರಾರಂಭಿಸಲಾಗಿದೆ.
ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆÉ, ಡಿಫೆನ್ಸ್ ಅಥವಾ ಮಾಜಿ ಸೈನಿಕ ವಿದ್ಯಾರ್ಥಿಗಳು, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಹಾಗೂ ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಎನ್‍ಡಬ್ಲ್ಯೂಕೆಆರ್‍ಟಿಸಿ, ಕೆಕೆಆರ್‍ಟಿಸಿ ನೌಕರರುಗಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಸೌಲಭ್ಯವಿರುತ್ತದೆ. ಕೋವಿಡ್‍ನಿಂದ ಮೃತರಾದ ಪೋಷಕರ ಮಕ್ಕಳಿಗೆ, ದೃಷ್ಟಿ ದೋಷವುಳ್ಳ ವಿದ್ಯಾರ್ಥಿಗಳಿಗೆ (ಜಿ.ಎಡ್ ಮತ್ತು ಎಂ.ಬಿ.ಎ. ಕೋರ್ಸ್‍ಗಳನ್ನು ಹೊರತುಪಡಿಸಿ) ಹಾಗೂ ತೃತೀಯ ಲಿಂಗಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.ksoumysuru.ac.in ನಲ್ಲಿ KSOU Admission Portal ಮೂಲಕ ಈ ಪದವಿಗಳಿಗೆ ಆನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯನ್ನು ಪರಿಶೀಲಿಸಿದ ನಂತರ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ, ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ-04, ನಂ.121, 2ನೇ ಮಹಡಿ, ಹೊಸೂರು ಮುಖ್ಯ ರಸ್ತೆ, ಮಡಿವಾಳ, ಬೆಂಗಳೂರು - 560068 ಅಥವಾ ದೂರವಾಣಿ ಸಂಖ್ಯೆಗಳಾದ 080-23158888, 8904036090, 6363390600 ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



