Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾದಕ ಪದಾರ್ಥ ತಯಾರಿಕಾ ಘಟಕಗಳ ಪತ್ತೆಗಾಗಿ ಕಾರ್ಯಾಚರಣೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಮಾದಕ ಪದಾರ್ಥ ತಯಾರಿಕಾ ಘಟಕಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ರಾಜ್ಯದ ವಿವಿಧ ನಿರ್ಜನ ಪ್ರದೇಶಗಳು, ಪಾಳು ಬಿದ್ದ ಮನೆಗಳು ಸೇರಿದಂತೆ ಹಲವೆಡೆ ಸಿಸಿಬಿಯ ಆರು ಘಟಕಗಳಿಂದ ನಿತ್ಯ ತಪಾಸಣೆ ನಡೆಸಲಾಗುತ್ತಿದ್ದು, ಮೆಡಿಕಲ್ ಶಾಪ್, ಹಳೇ ಗೋಡೌನ್‌ಗಳು, ಸಣ್ಣ ಅಂಗಡಿಗಳು, ಲಾಡ್ಜ್, ಪಿಜಿ, ರೌಡಿಶೀಟರ್‌ಗಳ ಮನೆಗಳು ಸೇರಿದಂತೆ ಅನುಮಾನಾಸ್ಪದ ಸ್ಥಳಗಳಲ್ಲಿ ಇಂಚಿಂಚೂ ಪರಿಶೀಲನೆ ನಡೆಸಲಾಗುತ್ತಿದೆ.


ಮಾದಕ ಪದಾರ್ಥಗಳು ಪತ್ತೆಯಾದರೆ ಸ್ಥಳೀಯ ಠಾಣೆಗಳಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ. ತಪಾಸಣೆ ಸಂದರ್ಭದಲ್ಲಿ ಎರಡು ಸ್ಥಳಗಳಲ್ಲಿ ಟೈಡಾಲ್ ಮಾತ್ರೆಗಳ ಅನಧಿಕೃತ ಮಾರಾಟ ಪತ್ತೆಯಾಗಿದೆ. ಅಲ್ಲದೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ 28 ರೌಡಿಶೀಟರ್‌ಗಳು ಪತ್ತೆಯಾಗಿದ್ದು, ವಾರೆಂಟ್ ಜಾರಿಗೊಳಿಸಿ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬೆಂಗಳೂರಿನ ವಿವಿಧೆಡೆ ದಾಸ್ತಾನು ಮಾಡಲಾಗಿದ್ದ 55.88 ಕೋಟಿ ರೂಪಾಯಿ ಮೌಲ್ಯದ ಮಾದಕ ಪದಾರ್ಥಗಳನ್ನು ಇಲ್ಲಿನ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಮಹಾರಾಷ್ಟ್ರದ ಕೊಂಕಣ್ ವಿಭಾಗದ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಪೊಲೀಸರು ಕಳೆದ ಡಿಸೆಂಬರ್‌ನಲ್ಲಿ ವಶಪಡಿಸಿಕೊಂಡಿದ್ದರು.


ಪ್ರಕರಣವೊಂದರ ಸಂಬಂಧ ನಾಲ್ವರನ್ನು ಬಂಧಿಸಿದ್ದ ಮಹಾರಾಷ್ಟ್ರ ಪೊಲೀಸರು, ಅವರ ಮಾಹಿತಿ ಆಧರಿಸಿ ಬೆಂಗಳೂರಿನ ಹೊರಮಾವು, ಯರಪ್ಪನಹಳ್ಳಿ, ಕಣ್ಣೂರುಗಳಲ್ಲಿ ದಾಳಿ ನಡೆಸಿದ್ದರು.
ಆರ್ ಜೆ
ಇವೆಂಟ್ ಹೆಸರಿನಲ್ಲಿ ಆರೋಪಿಗಳು ಮಾದಕ ಪದಾರ್ಥಗಳ ತಯಾರಿಕಾ ಘಟಕ ನಡೆಸುತ್ತಿದ್ದುದನ್ನು ಬಯಲಿಗೆಳೆದಿದ್ದರು.


ಮಾದಕ ವಸ್ತುಗಳು ನಾಶ:
ಅಬಕಾರಿ‌ಇಲಾಖೆ ಅಧಿಕಾರಿಗಳು ಬೆಂಗಳೂರಿನಲ್ಲಿ ವಶಪಡಿಸಿಕೊಂಡಿದ್ದ
5.71 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಶುಕ್ರವಾರ ನಾಶಪಡಿಸಿದ್ದಾರೆ.

ದಾಬಸ್‌ಪೇಟೆಯ KWWA‌ನಲ್ಲಿ ಬೆಂಗಳೂರು ಉತ್ತರ ವಿಭಾಗದ 1,2,3,4 ಅಬಕಾರಿ ಜಿಲ್ಲೆಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ 156 ಪ್ರಕರಣಗಳಲ್ಲಿ ಸುಮಾರು 650 ಕೆಜಿಯಷ್ಟು ಗಾಂಜಾ, 2.296 ಕೆಜಿ ಗಾಂಜಾ ಮಿಶ್ರಿತ ಚಾಕೋಲೆಟ್, 70 ಗ್ರಾಂ MDMA, 570 ಗ್ರಾಂ ಹಶೀಶ್ ಆಯಿಲ್, ಗಾಂಜಾ ಗಿಡಗಳು ಸೇರಿದಂತೆ ಹಲವು ರೀತಿಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಕಾನೂನಿನ ಕಣ್ಣುತಪ್ಪಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತುಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ನ್ಯಾಯಾಲಯದ ಅನುಮತಿ ಮೇರೆಗೆ ಶುಕ್ರವಾರ ಮಾದಕ ವಸ್ತಗಳನ್ನು ನಾಶಪಡಿಸಲಾಗಿದೆ‌.

 ಈ ವೇಳೆ ಬಿಯುಡಿ 1 ಉಪ ಆಯುಕ್ತ ಮೌಸಸ್ ಸ್ಯಾಮುಯೆಲ್, ಬಿಯುಡಿ 2 ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್, ಬಿಯುಡಿ 3 ಉಪ ಆಯುಕ್ತ ಮುರುಳಿ, ಬಿಯುಡಿ 4 ಉಪ ಆಯುಕ್ತ ಶಿವಲಿಂಗಪ್ಪ ಬನಹಟ್ಟಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಇಲಾಖೆಯ‌ಸಿಬ್ಬಂದಿ ಉಪಸ್ಥಿತರಿದ್ದರು.

ಡ್ರಗ್ಸ್‌ಗೆ ಕಡಿವಾಣ ಹಾಕಬೇಕು ಎಂದು ನಮ್ಮ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿತ್ತು. ಯುವಕರ ಆರೋಗ್ಯ, ಭವಿಷ್ಯದ ದೃಷ್ಟಿಯಿಂದ ಡ್ರಗ್ಸ್‌ಗೆ ಕಡಿವಾಣ ಹಾಕಬೇಕು. ಎನ್‌ಡಿಪಿಎಸ್ ಕಾಯ್ದೆ ಸಮರ್ಪಕವಾಗಿ, ಮತ್ತಷ್ಟು ಪರಿಣಾಮವಾಗಿ ಜಾರಿಗೊಳಿಸಬೇಕು ಎಂದು ಸೂಚಿಸಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ