Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಪರೇಷನ್ ಹಸ್ತ, ಬಾಯಿ ಮುಚ್ಚಿಕೊಂಡಿರಲು ಸೂಚನೆ

Advertisement
ಚಂದ್ರವಳ್ಳಿ ನ್ಯೂಸ್, ಜಗಳೂರು:
ಆಪರೇಷನ್ ಹಸ್ತದ ಕುರಿತು ಮಾಧ್ಯಮದವರ ಪ್ರಶ್ನೆಗೆ, ಎಐಸಿಸಿ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನನಗೆ ಬಾಯಿ ಮುಚ್ಚಿಕೊಂಡು ಕೂರಿ ಎಂದು ಹೇಳಿದ್ದಾರೆ. ಹಾಗಾಗಿ ನಾನು ಅದನ್ನು ಮಾಡುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದರು.


ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿ ಆಪರೇಷನ್ ಹಸ್ತ, ಸಿಎಂ ಬದಲಾವಣೆ ಆಗಲಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ, ಇಂತಹ ಪ್ರಶ್ನೆಗಳಿಗೆ ನಾನು ಉತ್ತರ ಕೊಡುವುದಿಲ್ಲ ಎಂದು ಮಧು ಬಂಗಾರಪ್ಪ ಬೇಸರ ವ್ಯಕ್ತಪಡಿಸಿದರು.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಕೋರ್ಟ್ ತೀರ್ಪು ಕೊಟ್ಟಿದೆ. ಮತ್ತೇನ್ ಬೇಕು?. ಸುಪ್ರೀಂ ಕೋರ್ಟ್​ಗೆ ಹೋಗುವ ಕಾನೂನು ಇದೆ. ಆದರೆ ಸುಪ್ರೀಂ ಕೋರ್ಟ್​ಗೆ ಹೋಗ್ಬೇಡಿ ಎನ್ನಲು ಬರಲ್ಲ. ಇದು ಅನಾವಶ್ಯಕವಾಗಿ ಭುಗಿಲೆದ್ದ ವಿಚಾರ. 13 ವರ್ಷದ ಹಿಂದಿನ ವಿಚಾರವನ್ನು ಆಗ ಕೆದಕಿದ್ರೆ ಏನಾಗುತ್ತೆ ಹೇಳಿ?" ಎಂದು ಪ್ರಶ್ನಿಸಿದರು.

53 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದವು. ಹಿಂದಿನ ಸರ್ಕಾರ 5000 ಹುದ್ದೆಗಳನ್ನು ತುಂಬಿದ್ದರು. ನಾನು ಬಂದ ಮೇಲೆ 13 ಸಾವಿರ ಹುದ್ದೆಗಳನ್ನು ತುಂಬಲು ಪ್ರಸ್ತಾವನೆ ಕಳಿಸಿದ್ದೇನೆ. ಈಗ ಶಿಕ್ಷಕರನ್ನು​ ತೆಗೆದುಕೊಳ್ಳಿ ಎಂದು ಬೇಡಿಕೆ ಇಟ್ಟಿದ್ದಾರೆ. ಅನುದಾನಿತ ಶಾಲೆಗೆ 9 ವರ್ಷದಿಂದ ಶಿಕ್ಷಕರನ್ನು ತೆಗೆದುಕೊಂಡಿರಲಿಲ್ಲ. ಆದರೆ ನಾನು ಕ್ರಮ ಕೈಗೊಂಡಿದ್ದೇನೆ. ಇದು ಬೆಳವಣಿಗೆ ತಾನೇ?.

ಒಂದೇ ಸಲ ಭರ್ತಿ ಮಾಡಲು ಆಗಲ್ಲ ಎಂದು ಸಚಿವರು ತಿಳಿಸಿದರು. ಕಲಬುರ್ಗಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 6 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ಕೊಟ್ಟಿದ್ದಾರೆ.

ನಮ್ಮ ಸರ್ಕಾರ ಬಂದು ಒಂದು ವರ್ಷ ಒಂಬತ್ತು ತಿಂಗಳಾಗಿವೆ. ಕ್ರಮೇಣ ಶಿಕ್ಷಕರ ನೇಮಕಾತಿ ಹಂತ ಹಂತವಾಗಿ ಮಾಡುತ್ತೇವೆ ಎಂದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ