LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು
, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ.

ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು.

ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಈ ಬಗ್ಗೆ ವಾರದೊಳಗೆ ಕ್ರಮ ವಹಿಸುವುದಾಗಿ ತಿಳಿಸಿದ್ದರು. ಸಿಎಂ ಸೂಚನೆ ಮೇರೆಗೆ ಹೊಸ ಆದೇಶ ಹೊರಬಿದ್ದಿದೆ.

ಪೂರ್ಣಾವಧಿಗೆ ಸೀಮಿತವಾಗಿದ್ದನ್ನು ಬದಲಿಸಿ, ಅರೆಕಾಲಿಕ ವರದಿಗಾರರಿಗೂ ಯೋಜನೆ ವಿಸ್ತರಿಸಲಾಗಿದೆ.

ಸೌಲಭ್ಯ ಪಡೆಯಲು 11 ತಿಂಗಳ ಲೈನೇಜ್ ಪಡೆದಿರುವ ಬ್ಯಾಂಕ್ ಸ್ಟೇಟ್ ಮೆಂಟ್ ಕಡ್ಡಾಯವಾಗಿದ್ದನ್ನು ಷರತ್ತಿನಲ್ಲಿ ಕೈಬಿಡಲಾಗಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸತತ ಹೋರಾಟಕ್ಕೆ ಸ್ಪಂಧಿಸಿ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ (ಭಾವಿ ಸಿಎಂ) ಡಿ.ಕೆ.ಶಿವಕುಮಾರ್ ಅವರು ಈ ನಿಟ್ಟಿನಲ್ಲಿ ಸತತವಾಗಿ ಸ್ಪಂಧಿಸಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಭಿನಂದನೆ ಸಲ್ಲಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ