Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಪ್ರಿಲ್ 26 ರಂದು “ರೈತ ಸಂತೆ” ಆಯೋಜನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕಾರ್ಯ ಚಟುವಟಿಕೆಗಳು ಮತ್ತು ಉತ್ಪನ್ನಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ರೈತ ಸಂತೆಯನ್ನು ಏಪ್ರಿಲ್ 26 ರಂದು ಬೆಳಿಗ್ಗೆ 7.00 ರಿಂದ ಸಂಜೆ 4.00 ಗಂಟೆಯವರೆಗೆ ಬೆಂಗಳೂರಿನ ಜಿ.ಕೆ.ವಿ.ಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ರೈತರ ಸಂತೆಯಲ್ಲಿ ಕೃಷಿ ಉತ್ಪನ್ನ / ಪರಿಕರಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಿತ್ತನೆ ಬೀಜಗಳು, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ಸಾವಯವ ಉತ್ಪನ್ನಗಳು, ತೋಟಗಾರಿಕೆ: ಹಣ್ಣುಗಳು, ಸುಗಂಧ ಮತ್ತು ಔಷಧೀಯ ಸಸ್ಯಗಳು, ಜೈವಿಕ ಗೊಬ್ಬರಗಳು,

ಕೃಷಿ ಯಂತ್ರೋಪಕರಣಗಳು, ಎರೆಹುಳು ಗೊಬ್ಬರ, ಸಸ್ಯ ಸಂರಕ್ಷಣೆ: ಜೈವಿಕ ಕೀಟನಾಶಕಗಳು, ಗುಣಮಟ್ಟದ ಪದಾರ್ಥಗಳು ಪರಿಕರಗಳು, ಕರಕುಶಲ ವಸ್ಥುಗಳು: ಗವ್ಯೋತ್ಪನ್ನಗಳು, ಅಡಿಕೆ ಉತ್ಪನ್ನಗಳು, ರೇಷ್ಮೆ ಕೃಷಿಯ ಉಪ-ಉತ್ಪನ್ನಗಳು, ಅಣಬೆ, ಜೇನು ಕೃಷಿ, ವಾಣಿಜ್ಯೀಕರಣ ಉತ್ಪನ್ನಗಳು, ಪಶು ಸಂಗೋಪನೆ, ಕೃಷಿ ಪ್ರಕಟಣೆಗಳು, ವಿಶ್ವವಿದ್ಯಾನಿಲಯದ ಬಗ್ಗೆ ಮಾಹಿತಿ,

ತಾರಸಿ ಕೈತೋಟ / ನಗರ ತೋಟಗಾರಿಕೆ ಇನ್ನು ಮುಂತಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯಿರುತ್ತದೆ. ಸಾರ್ವಜನಿಕರು ಮತ್ತು ರೈತರು ವಿನೂತನ ಸಂತೆಯ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ