Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಮೆಟ್ರೋ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ-ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಜೀವನಾಡಿಯಾಗಿರುವ ನಮ್ಮ ಮೆಟ್ರೋ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.


ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ಮೆಟ್ರೋ ಯೋಜನೆ ಗಮನಾರ್ಹ ಪ್ರಗತಿ ಸಾಧಿಸಿದೆ, ನಗರದ ಪ್ರಮುಖ ಸಾರಿಗೆ ವಿಧಾನವಾಗಲು ಸಿದ್ಧವಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

ಮೆಟ್ರೋ ಜಾಲ ಬಲಪಡಿಸಲು, ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ಮಾದವರ (ಬಿಐಇಸಿ) ಯಿಂದ ತುಮಕೂರನ್ನು ಸಂಪರ್ಕಿಸುವ 52.41 ಕಿಮೀ ಮಾರ್ಗಕ್ಕೆ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸೂಚಿಸಲಾಗಿದೆ. ಇದರ ಜೊತೆಗೆ 50 ಕಿಮೀ ಮೆಟ್ರೋ ವಿಸ್ತರಣೆಯನ್ನು ಪ್ರಸ್ತಾಪಿಸಲಾಗಿದೆ. ಇದರಲ್ಲಿ ಮೂರು ಹೊಸ (ಚಲ್ಲಘಟ್ಟದಿಂದ ಬಿಡದಿ (15 ಕಿಮೀ), ರೇಷ್ಮೆ ಸಂಸ್ಥೆಯಿಂದ ಹಾರೋಹಳ್ಳಿ (24 ಕಿಮೀ), ಮತ್ತು ಬೊಮ್ಮಸಂದ್ರದಿಂದ ಅತ್ತಿಬೆಲೆ (11 ಕಿಮೀ)) ಮಾರ್ಗಗಳಿವೆ ಎಂದು ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಮತ್ತೊಂದು ಪ್ರಸ್ತಾವನೆಯಲ್ಲಿ ಕಳೇನ ಅಗ್ರಹಾರ (ಗೊಟ್ಟಿಗೆರೆ)-ಜಿಗಣಿ-ಆನೇಕಲ್-ಅತ್ತಿಬೆಲೆ-ಸರ್ಜಾಪುರ-ವರ್ತೂರು-ಕಾಡುಗೋಡಿ ಟ್ರೀಪಾರ್ಕ್ ನ 68 ಕಿ.ಮೀ ಒಳಗೊಂಡಿದೆ.

ನಮ್ಮ ಮೆಟ್ರೋದ ಹಂತ-3ರ ಭಾಗವಾಗಿ, ಎರಡು ಪ್ರಮುಖ ಕಾರಿಡಾರ್‌ಗಳನ್ನು ರೂಪಿಸಲಾಗಿದೆ. ಕಾರಿಡಾರ್-1 ಜೆಪಿ ನಗರ 4 ನೇ ಹಂತದಿಂದ ಹೆಬ್ಬಾಳದವರೆಗೆ 29.20 ಕಿ.ಮೀ. ಉದ್ದದ ರಸ್ತೆ, ಕಾರಿಡಾರ್-2 ಹೊಸಹಳ್ಳಿಯಿಂದ ಕಡಬಗೆರೆಗೆ 11.45 ಕಿ.ಮೀ. ಉದ್ದದ ರಸ್ತೆಯಾಗಿದೆ.

ಹೆಚ್ಚುವರಿ ಹಂತ-3 ಪ್ರಸ್ತಾವನೆಗಳಲ್ಲಿ ಸರ್ಜಾಪುರದಿಂದ ಇಬ್ಬಲೂರು (ಹೊರ ವರ್ತುಲ ರಸ್ತೆ ಜಂಕ್ಷನ್) ವರೆಗಿನ 14 ಕಿ.ಮೀ. ಮಾರ್ಗ ಮತ್ತು ಅಗರದಿಂದ ಕೋರಮಂಗಲ 3 ನೇ ಬ್ಲಾಕ್‌ಗೆ 2.45 ಕಿ.ಮೀ. ಸಂಪರ್ಕ ಸೇರಿವೆ. ಇದು ನಗರದ ಅತ್ಯಂತ ಜನನಿಬಿಡ ಐಟಿ ಕಾರಿಡಾರ್‌ಗಳಲ್ಲಿ ಒಂದಾಗಿದೆ ಎಂದು ಡಿಸಿಎಂ ಶಿವಕುಮಾರ ಮಾಹಿತಿ ನೀಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ