Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭರಮಸಾಗರದಲ್ಲಿ ರೈತರಿಗೆ ಹೊರಾಂಗಣ ತರಬೇತಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಬ್ಬೂರುಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಇದೇ ಡಿ.23ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಎದುರಿಗಿರುವ

ಮಾರುಕಟ್ಟೆ ಆವರಣದ ಗೋದಾಮಿನಲ್ಲಿ ಜಿಲ್ಲೆಯ ಕೃಷಿಕರಿಗೆ ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೆÇಸ್ಟ್ ತಯಾರಿಕೆಕುರಿತು ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ತರಬೇತಿ ಕಾರ್ಯಕ್ರಮದಲ್ಲಿ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈವೇಟ್‍ನ  ತುಮಕೂರಿನ ತಾಂತ್ರಿಕ ಅಧಿಕಾರಿಯಾದ ಕುಮಾರ್ ಅವರು ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೆÇಸ್ಟ್ ತಯಾರಿಕೆ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.

ನಂತರ ಕೋಗುಂಡೆ ಗ್ರಾಮದ ರೈತರಾದ ಲೋಕೇಶ್ ಎಚ್ ಸಿ ಇವರು ಅಡಿಕೆ ಸಿಪ್ಪೆಯಿಂದ ಕಾಂಪೆÇೀಸ್ಟ್ ತಯಾರಿಸಿ ಬಳಸುತ್ತಿರುವ ತಮ್ಮ ಅನುಭವವನ್ನು ತಿಳಿಸುವರು. ಆದ ಪ್ರಯುಕ್ತ ಆಸಕ್ತ ರೈತ ಬಾಂಧವರು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ಸದರಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.

ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಲು ಕೋರಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ