Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಶುವೈದ್ಯ ವಿಜ್ಞಾನಿ ಡಾ.ಎನ್.ಬಿ.ಶ್ರೀಧರ್‌ಗೆ "ಶ್ರೇಷ್ಠ ಸಂಶೋಧಕ" ಪ್ರಶಸ್ತಿ

Advertisement
ಶಿವಮೊಗ್ಗ : ನಗರದ ಪಶುವೈದ್ಯ ಮಹಾವಿದ್ಯಾಲಯ ಪಶುವೈದ್ಯ ವಿಜ್ಞಾನಿ ಡಾ|| ಎನ್.ಬಿ.ಶ್ರೀಧರ ಅವರಿಗೆ ೨೦೨೪ ನೇ ಸಾಲಿನ " "ಶ್ರೇಷ್ಟ ಸಂಶೋಧಕ" ಪ್ರಶಸ್ತಿ ನೀಡಿ ಗುರುವಾರ ಶಿವಮೊಗ್ಗದ ಪಶುವೈದ್ಯ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಇವರು ಪಶುವೈದ್ಯ ರಂಗದಲ್ಲಿ ಔಷಧಶಾಸ್ತ್ರ ಮತ್ತು ವಿಷಶಾಸ್ತ್ರ ವಿಷಯವನ್ನು ಬೋಧನೆ ಮಾಡುತ್ತಿದ್ದಾರೆ. ೨೦೦ ಕ್ಕೂ ಹೆಚ್ಚಿನ ಸ್ನಾತಕೋತ್ತರ ಮತ್ತು ಡಾಕ್ಟರೇಟ್ ವಿದ್ಯಾರ್ಥಿಗಳಿಗೆ ಸಂಶೋಧನೆಯಲ್ಲಿ ಮಾರ್ಗದರ್ಶನ ಮಾಡಿದ್ದಾರೆ. ಜಾನುವಾರುಗಳಲ್ಲಿ ಬರುವ ಅನೇಕ ರೀತಿಯ ಸಸ್ಯಜನ್ಯ ಶಿಲೀಂದ ವಿಷಜನ್ಯ ಮತ್ತಿತರ ನಿಗೂಢ ಕಾಯಿಲೆಗಳ ಬಗ್ಗೆ ಸಂಶೋಧನೆ ನಡೆಸಿ ಅವುಗಳಿಗೆ ಕಾರಣ ಮತ್ತು ಚಿಕಿತ್ಸೆಯನ್ನು ಪತ್ತೆ ಮಾಡಿ ಜಾನುವಾರುಗಳ ಉಳಿವಿಗೆ ಕಾರಣರಾಗಿದ್ದಾರೆ.

ಇಂತಹ ಸಂಶೋಧನಾ ಚಟುವಟಿಕೆಗಳನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ. ಇತ್ತೀಗಷ್ಟೆ ಇವರಿಗೆ ಭಾರತೀಯ ಪಶುವೈದ್ಯಕೀಯ ಔಷಧಶಾಸ್ತ್ರಜ್ಞರ ಮತ್ತು ವಿಷಶಾಸ್ತ್ರಜ್ಞರ ಸಂಘವು"ರಾಷ್ಟ್ರೀಯ ಫೆಲೊ" ಪ್ರಶಸ್ತಿ ನೀಡಿರುವುದನ್ನು,ಕರ್ನಾಟಕರಾಜ್ಯ ಪಶುವೈದ್ಯ ಸಂಘವು"ಜೀವ ಮಾನದ ಶ್ರೇಷ್ಟ ಪಶುವೈದ್ಯ" ಪ್ರಶಸ್ತಿ ನೀಡಿರುವುದನ್ನು ಮತ್ತುಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯವು"ಶ್ರೇಷ್ಟಶಿಕ್ಷಕ" ಪ್ರಶಸ್ತಿಯನ್ನು ನೀಡಿರುವುದನ್ನು ಈ ಸಂದರ್ಭದಲ್ಲಿ ನೆನೆಯಬಹುದಾಗಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ