ಚಂದ್ರವಳ್ಳಿ ನ್ಯೂಸ್ ಚಿತ್ರದುರ್ಗ:
ಹಿರಿಯೂರಿನ ಜನಪ್ರಿಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿವಂಗತ ಡಿ.ಸುಧಾಕರ್ ಅವರ ನಿಧನಕ್ಕೆ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಅವರು ತೀವ್ರ ಸಂತಾಪ ವ್ಯಕ್ತಪಡಿಸಿ, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ದಿ. ಡಿ.ಸುಧಾಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಟಿ.ರಘು ಅವರು,"ಸುಧಾಕರ್ ಅವರ ಅಗಲಿಕೆ ಜಿಲ್ಲೆಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಜನಪರ ಕೆಲಸಗಳು ಮತ್ತು ಅಭಿವೃದ್ಧಿ ಕಾರ್ಯಗಳು ಎಂದಿಗೂ ಸ್ಮರಣೀಯ," ಎಂದು ಸ್ಮರಿಸಿದರು.
ಈ ಶ್ರದ್ಧಾಂಜಲಿ ಸಭೆಯಲ್ಲಿ ಜಿಲ್ಲಾ ಮಟ್ಟದ ಪ್ರಮುಖ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ. ತಾಜ್ ಫೀರ್, ಕಾರ್ಯಾಧ್ಯಕ್ಷ ಹಾಲೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೈಲಾರಪ್ಪ ಸೇರಿದಂತೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು, ಅಗಲಿದ ನಾಯಕನಿಗೆ ಮೌನಾಚರಣೆಯ ಮೂಲಕ ಗೌರವ ಸಲ್ಲಿಸಿದರು.


