ಪೌರ ಕಾರ್ಮಿಕರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಶಕ್ತಿ ಮೀರಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಭರವಸೆ ನೀಡಿದರು.
ರಾಜಧಾನಿಯಲ್ಲಿ ಪದಗ್ರಹಣ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮೆರವಣಿಗೆ ಮೂಲಕ ಆಗಮಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುವ ನೇತಾರ ರಾಹುಲ್‌ಗಾಂಧಿ, ಸುರ್ಜೆವಾಲಾ, ಮಯೂರ್ ಜೈಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಎಲ್ಲಾ ಶಾಸಕರುಗಳ ಆಶೀರ್ವಾದಿಂದ ನನಗೆ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಸ್ಥಾನ ಸಿಕ್ಕಿದೆ. ನಾಯಕರುಗಳು ನನ್ನ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸಕ್ಕೆ ಧಕ್ಕೆ ಬರದಂತೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆಂದರು.
ಸಮಾಜದ ಕೊಳೆಯನ್ನು ಸ್ವಚ್ಛಗೊಳಿಸುವ ಕಟ್ಟ ಕಡೆಯ ಪೌರ ಕಾರ್ಮಿಕರಿಗೆ ಅನೇಕ ಸಮಸ್ಯೆಗಳಿವೆ. ಬರೀ ಪೌರ ಕಾರ್ಮಿಕರಷ್ಟೆ ಅಲ್ಲ. ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛಗಾರರಾಗಿ ಕೆಲಸ ಮಾಡುವವರ ಬೇಡಿಕೆಗಳಿಗೂ ಧ್ವನಿಯಾಗಿ ಸಂವಿಧಾನದ ಆಶಯದಂತೆ ಕೆಲಸ ಮಾಡುತ್ತೇನೆ. ಹೊಳಲ್ಕೆರೆ ಕ್ಷೇತ್ರದ ಅಭಿಮಾನಿಗಳು ನನಗೆ ತೋರಿಸುತ್ತಿರುವ ಬೆಂಬಲಕ್ಕೆ ಋಣಿಯಾಗಿರುತ್ತೇನೆಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ ಪಕ್ಷಕ್ಕೆ ನಿಷ್ಟೆಯಿಂದ ದುಡಿಯುವವರಿಗೆ ಒಂದಲ್ಲ ಒಂದು ದಿನ ಅಧಿಕಾರ ಸಿಕ್ಕೇ ಸಿಗುತ್ತದೆಂಬುದಕ್ಕೆ ಪಿ.ರಘು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿರುವುದೇ ಸಾಕ್ಷಿ. ಸಿಕ್ಕಿರುವ ಅವಕಾಶ ಬಳಸಿಕೊಂಡು ಸಮಾಜ ಮೆಚ್ಚುವ ರೀತಿಯಲ್ಲಿ ಕೆಲಸ ಮಾಡಲಿ ಎಂದು ಹಾರೈಸಿದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ಮರುಳಾರಾಧ್ಯ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಣ್ಣ,
ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಹೆಚ್.ಅಂಜಿನಪ್ಪ, ನಾಗಣ್ಣ ಸೂರನಹಳ್ಳಿ, ಸೈಯದ್ ಖುದ್ದೂಸ್, ಜಿ.ವಿ.ಮಧುಗೌಡ, ಕಿರಣ್‌ಯಾದವ್, ಲಕ್ಷ್ಮಿಕಾಂತ್, ಲೋಕೇಶ್ವರಪ್ಪ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ನಂದಿನಿಗೌಡ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಸೇರಿದಂತೆ ನೂರಾರು ಅಭಿಮಾನಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಹಾಗೂ ಪೌರ ಕಾರ್ಮಿಕರು ಬೃಹಧಾಕಾರದ ಹಾರ ಹಾಕಿ ಪಿ.ರಘುಗೆ ಸನ್ಮಾನಿಸಿದರು.


