Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತ ಮುಖ್ಯಮಂತ್ರಿಯನ್ನ ಹೈಕಮಾಂಡ್ ತೀರ್ಮಾನ ಮಾಡುತ್ತೆ-ಪರಮೇಶ್ವರ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷದವರೇ ದಲಿತ ಮುಖ್ಯಮಂತ್ರಿಯನ್ನ ಮಾಡಬೇಕಲ್ಲ? ಇನ್ಯಾರು ಮಾಡುತ್ತಾರೆ. ಸಂದರ್ಭ ಬಂದಾಗ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾತನಾಡಿದರು. ದಲಿತ ಮುಖ್ಯಮಂತ್ರಿ ಕೂಗು ವಿಚಾರ ಕುರಿತು ಪ್ರತಿಕ್ರಿಯಿಸಿದ ಇದೆಲ್ಲ ಪ್ರತಿಪಕ್ಷದವರು ಮಾಡುತ್ತಿರುವ ಕೆಲಸ. ಅವರು ತಮ್ಮ ವಿಚಾರಗಳನ್ನು ಮುಚ್ಚಿಟ್ಟುಕೊಳ್ಳಲು ಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಆಡಳಿತ ಮಾಡುತ್ತಿಲ್ಲವೇ? ಕಳೆದ 12 ದಿನಗಳಿಂದ ಬಜೆಟ್ ಕುರಿತು ವಿವಿಧ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತಿದ್ದಾರೆ. ವಿಪಕ್ಷದವರು ಮುಖ್ಯಮಂತ್ರಿ ವಿಚಾರವನ್ನು ಸುಮ್ಮನೆ ಹೊರಗೆ ತರುತ್ತಿದ್ದಾರೆ ಎಂದರು.


ಮುಖ್ಯಮಂತ್ರಿ ಸಿದ್ದರಾಮಯ್ಯರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ. ಆ ಸಿದ್ಧಾಂತದ ಮೇಲೆ ರಾಜಕೀಯ ಮಾಡಿಕೊಂಡು ಬಂದಿದ್ದಾರೆ. ಇದರಲ್ಲಿ ಹೊಸದೇನೂ ಇಲ್ಲ. ಸಾಮಾಜಿಕ ನ್ಯಾಯದ ಮೇಲೆ ಬದ್ಧರಾಗಿದ್ದಾರೆ. ಹಿಂದಿನಿಂದಲೂ ಕೂಡ ಸಾಮಾಜಿಕ ನ್ಯಾಯದ ಪರವಾಗಿದ್ದಾರೆ. ಹೊಸದಾಗಿ ಇವತ್ತು ಮಾಡುತ್ತಿಲ್ಲ ಎಂದು ಪರಮೇಶ್ವರ್ ತಿಳಿಸಿದರು.

ರಂಜಾನ್ ಹಾಗೂ ಹೋಳಿ ಹಬ್ಬ ಆಚರಣೆ ವೇಳೆ ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಕೊಡಬಾರದು. ಸಂತೋಷದಿಂದ ಹಬ್ಬ ಆಚರಿಸಬೇಕು ಎಂದು ಗೃಹ ಸಚಿವರು ಹೇಳಿದರು.

ಶಾಲಾ - ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆದಿದೆ. 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಕೊಟ್ಟರೆ ವಿದ್ಯಾಭ್ಯಾಸದ ಮೇಲೆ ಬೇರೆ ರೀತಿಯ ಪರಿಣಾಮ ಬೀರುತ್ತಿದೆ. ಬಹಳಷ್ಟು ದೇಶಗಳಲ್ಲಿ ಅಧ್ಯಯನ ನಡೆಸಿ ಮೊಬೈಲ್ ಬ್ಯಾನ್ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಚಿಂತನೆ ಹರಿಸಿದ್ದಾರೆ. ಇದರ ಸಾಧಕ-ಬಾಧಕಗಳನ್ನು ಅಧ್ಯಯನ ನಡೆಸಿ ತೀರ್ಮಾನ ಮಾಡುತ್ತಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.

ಅಲರ್ಟ್:
ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಅಕ್ರಮ ಬಾಂಗ್ಲಾ ವಲಸಿಗರ ಬಂಧನ ಹಿನ್ನೆಲೆಯಲ್ಲಿ
, ರಾಜ್ಯದಲ್ಲಿ ಆಂತರಿಕ ಭದ್ರತಾ ವಿಭಾಗದವರು ಅಲರ್ಟ್ ಮಾಡಿದ್ದಾರೆ. ಕಳೆದ ಒಂದು ತಿಂಗಳಿಂದ ಪ್ರತಿ ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಕಾಫಿ ತೋಟ, ಕಟ್ಟಡಗಳಲ್ಲಿ ಕೆಲಸ ಮಾಡುತ್ತಾರೆ ಎಂಬುದನ್ನು ಕೂಡ ವಿಪಕ್ಷದವರು ಹೇಳಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಪ್ರತಿ ಪೊಲೀಸ್ ಠಾಣೆ ಹಂತದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.

ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ವಿಚಾರದ ಕುರಿತು ಮಾತನಾಡಿ, ಕೆ.ಹೆಚ್.ರಂಗನಾಥ್ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಯೂನಿವರ್ಸಿಟಿ, ಕಾಲೇಜುಗಳಲ್ಲಿ ನಡೆಯುತ್ತಿದ್ದ ಚುನಾವಣೆ ವೇಳೆ ಘರ್ಷಣೆಗಳು ನಡೆದವು. ಆ ಕಾರಣಕ್ಕಾಗಿ ವಿದ್ಯಾರ್ಥಿ ಚುನಾವಣೆಗಳನ್ನು ನಿಷೇಧಿಸಿದರು.

ಚುನಾವಣೆ ತಂದರೆ ವಿದ್ಯಾರ್ಥಿಗಳ ನಡುವೆ ಗುಂಪುಗಳಾಗಿ ಹೊಡೆದಾಡಿಕೊಳ್ಳುತ್ತಾರೆ ಎಂಬ ಕಾರಣದಿಂದ ನಾನು ಉನ್ನತ ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ಸಿಂಡಿಕೇಟ್ ಚುನಾವಣೆ ಬ್ಯಾನ್ ಮಾಡಲಾಯಿತು. ಈಗ ವಿದ್ಯಾರ್ಥಿ ಚುನಾವಣೆ ನಡೆಸುವ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕು ಎಂಬ ಒತ್ತಡ ಬರುತ್ತಿದೆ. ಈ ಬಗ್ಗೆ ಕ್ಯಾಬಿನೆಟ್ ಏನು ನಿರ್ಧಾರ ಮಾಡುತ್ತದೆ ಎಂದು ನೋಡಬೇಕು ಎಂದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ