Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶಭಕ್ತ ಭಗತ್‌ಸಿಂಗ್‌ರ 109ನೇ ಜನ್ಮದಿನಾಚರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಧೀರ ಹುತಾತ್ಮ
, ದೇಶಭಕ್ತ ಭಗತ್‌ಸಿಂಗ್‌ರ ೧೧೯ ನೇ ಜನ್ಮದಿನಾಚರಣೆಯನ್ನು ಎಐಡಿಎಸ್‌ಓ. ಎಐಡಿವೈಓ. ಎಐಎಂಎಸ್‌ಎಸ್. ವತಿಯಿಂದ ರೋಟರಿ ಬಾಲಭವನದ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ಭಾನುವಾರ ಆಚರಿಸಲಾಯಿತು. ನೂರಾರು ಅಭಿಮಾನಿಗಳು ಪಾಲ್ಗೊಂಡಿದ್ದು, ಭಗತ್‌ಸಿಂಗ್‌ರವರ ಭಾವಚಿತ್ರಕ್ಕೆ ಪುರ್ಷ್ಪಾಚನೆ ಸಲ್ಲಿಸಿದರು.

ಎಐಯುಟಿಯುಸಿ ಜಿಲ್ಲಾ ಸಂಚಾಲಕ ರವಿಕುಮಾರ್ ಮಾತನಾಡಿ ಬ್ರಿಟೀಷರ ಎದೆಯಲ್ಲಿ ನಡುಕ ಹುಟ್ಟಿಸಿದ ಕೆಚ್ಚೆದೆಯ ವೀರ ಭಗತ್‌ಸಿಂಗ್‌ರವರ ಚಿಂತನೆಗಳನ್ನು ಇಂದಿನ ಯುವ ಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕೇವಲ ೨೩ ನೇ ವಯಸ್ಸಿಗೆ ನೇಣಿಗೆ ಕೊರಳೊಡ್ಡಿದ ಭಗತ್‌ಸಿಂಗ್ ವಿಚಾರ ಯಾರಿಗೂ ಬೇಕಾಗಿಲ್ಲ.

ಇಲ್ಲಿಯವರೆಗೂ ಆಳಿದ ಎಲ್ಲಾ ಸರ್ಕಾರಗಳು ನಿರ್ಲಕ್ಷಿಸುತ್ತಲೆ ಬರುತ್ತಿವೆ. ಜಲಿಯನ್‌ವಾಲಾಬಾಗ್ ಘಟನೆ ಅವರ ಮನಸ್ಸಿನ ಮೇಲೆ ಗಾಢ ಪರಿಣಾಮ ಬೀರಿತು. ಬ್ರಿಟೀಷರ ಗುಲಾಮಗಿರಿ ವಿರುದ್ದ ಧ್ವನಿ ಎತ್ತಿ ದೇಶದ ಸ್ವಾತಂತ್ರ್ಯದ ಬಗೆಗಿನ ಪರಿಕಲ್ಪನೆ ಭಗತ್‌ಸಿಂಗ್‌ರಲ್ಲಿ ಪಕ್ವಗೊಂಡು ಇಂದಿಗೂ ಎಲ್ಲರೆದೆಯಲ್ಲಿ ಧೀರ ಹುತಾತ್ಮನಾಗಿ ಉಳಿದುಕೊಂಡಿದ್ದಾರೆಂದು ಸ್ಮರಿಸಿದರು.

ಎಐಎಂಎಸ್‌ಎಸ್ ಮಹಿಳಾ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಕುಮುದ, ಎಐಡಿಎಸ್‌ಓ. ಜಿಲ್ಲಾ ಸಂಚಾಲಕ ಮಹಂತೇಶ್, ಎಐಡಿವೈಓ. ಸಂಘಟನಾ ಸಂಚಾಲಕ ಕೃಷ್ಣ ಭರತ್, ಶಿವಕುಮಾರ್, ಗಿರಿಜಮ್ಮ, ಗುರುಶಾಂತ, ಲಕ್ಷ್ಮಿ, ಭಗತ್‌ಸಿಂಗ್ ಅಭಿಮಾನಿಗಳು, ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಟ್ಯಾಕ್ಸಿ ಚಾಲಕರುಗಳು ಜನ್ಮದಿನಾಚರಣೆಯಲ್ಲಿ ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ