Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪವಿತ್ರಾ ಗೌಡ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಮಗಳಿಗೆ ಪರೀಕ್ಷೆ ಹಿನ್ನೆಲೆಯಲ್ಲಿ ಈ ವೇಳೆ ಆಕೆಯ ಜೊತೆಗೆ ಇರಬೇಕಿದೆ. ಹೀಗಾಗಿ 20 ದಿನಗಳ ಕಾಲ ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ.ಐ.ಪಿ. ನಾಯಕ್, ಅರ್ಜಿಯನ್ನು ಅಮಾನ್ಯಗೊಳಿಸಿ ಆದೇಶಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಮೊದಲ ಆರೋಪಿಯಾಗಿದ್ದಾರೆ. ಇವರೊಂದಿಗೆ ದರ್ಶನ್, ನಾಗರಾಜ್, ಪ್ರದೂಷ್ ಸೇರಿದಂತೆ ಏಳು ಮಂದಿ ಆರೋಪಿಗಳು ಕಳೆದ ವರ್ಷ ಆಗಸ್ಟ್ 15ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷಾ ಬಂಧಿಯಾಗಿದ್ದಾರೆ.

ತಮ್ಮ ಮಗಳಿಗೆ ಪರೀಕ್ಷೆ ಇರುವುದರಿಂದ 20 ದಿನಗಳ ಕಾಲ ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿತ್ತು.

ಹತ್ಯೆ ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಂತದಲ್ಲಿ ಪವಿತ್ರಾ ಗೌಡ ಅವರಿಗೆ ಮಧ್ಯಂತರ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರತಿಕೂಲ ಬೀರುವ ಸಾಧ್ಯತೆಯಿದೆ ಎಂದು ಎಸ್​ಪಿಪಿ ವಾದ ಮಂಡಿಸಿದ್ದರು.
ಎರಡು ಕಡೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಪವಿತ್ರಾ ಗೌಡ ಅವರಿಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿ ಆದೇಶಿಸಿದೆ.


ಮನೆ ಊಟಕ್ಕೆ  ತಡೆ:
ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ
, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ನಗರದ ಸೆಷನ್ಸ್ ನ್ಯಾಯಾಲಯ ಅನುಮತಿ ನೀಡಿತ್ತು. ಆದರೆ, ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​ ಸೆಷನ್ಸ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದ್ದು, ಪ್ರತಿವಾದಿಗಳಾದ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರಿಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚನೆ ನೀಡಿತ್ತು.

ಏನಿದು ಪ್ರಕರಣ:
ಕೊಲೆ ಆರೋಪಿ ಪವಿತ್ರಾ ಗೌಡ ಅವರಿಗೆ ಕೊಲೆಯಾದ ಮೃತ ವ್ಯಕ್ತಿ ಅಶ್ಲೀಲಕರ ಸಂದೇಶಗಳ ರವಾನೆ ಮಾಡಿದ ಆರೋಪದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ದರ್ಶನ್​ ಮತ್ತವರ ಸಹಚರರು ಕೊಲೆ ಮಾಡಿರುವ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದಾರೆ.


 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ