Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಡಿಒ ಅಂತಿಮ ಆಯ್ಕೆ ಪಟ್ಟಿ ಪ್ರಕಟ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹೈ.ಕ ವೃಂದದ 97 ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಹಾಗೂ ಉಳಿಕೆ ಮೂಲ ವೃಂದದ-150 ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ.


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೈದ್ರಾಬಾದ್-ಕರ್ನಾಟಕ ವೃಂದದ 97 ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿಯನ್ನು ಮತ್ತು ಉಳಿಕೆ ಮೂಲ ವೃಂದದ 150 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ದಿನಾಂಕ:20-02-2026ರಂದು ಆಯೋಗದ http://kpsc.kar.nic.in-Lists-Final Selection List  ಮತ್ತು ಕಟ್ ಆಫ್ ಅಂಕಗಳ ಪಟ್ಟಿಯನ್ನು ಆಯೋಗದ ಜಾಲತಾಣ http://kpsc.kar.nic.in-Lists-Cut-Off List ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಸದರಿ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಆಯ್ಕೆಯಾಗಲು ಇಚ್ಛಿಸದಿದ್ದಲ್ಲಿ ಆಯೋಗದ ಅಂತರ್ಜಾಲದಲ್ಲಿ ಲಭ್ಯವಿರುವ Not-Willingress Certificate ಅನ್ನು ಡೌನ್‍ಲೋಡ್ ಮಾಡಿಕೊಂಡು Stamp Paper ನಲ್ಲಿ ನೋಟರಿ ಮುಖಾಂತರ ದೃಢೀಕರಿಸಿರುವ ಪ್ರಮಾಣಪತ್ರ ಮತ್ತು ಪೂರಕ ದಾಖಲೆಗಳೊಂದಿಗೆ ಆಯೋಗಕ್ಕೆ ಖುದ್ದಾಗಿ ಹಾಜರಾಗಿ ಸ್ವ-ಇಚ್ಚಾ ಹೇಳಿಕೆಯನ್ನು (Not Willing) ಸಲ್ಲಿಸುವಂತೆ ಹಾಗೂ ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿ ಸಂಬಂಧ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ,

ಈ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ 07 ದಿನಗಳ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ. ಬೆಂಗಳೂರು-560001., ಇವರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಹಾಗೂ ಕೊನೆಯ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲವೆಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜ್ಯೋತಿ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ