Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಗೆ ಜೈ ಎಂದ ಮುಂಬೈ ಜನತೆ!

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ನಂತರ ಈಗ ಮಹಾರಾಷ್ಟ್ರದ ಪ್ರತಿಷ್ಠಿತ ಬಿಎಂಸಿ ಸೇರಿದಂತೆ ಪುಣೆ, ನಾಗಪುರ ಹಾಗೂ ರಾಜ್ಯದ ಎಲ್ಲಾ ಪ್ರಮುಖ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ (ಏಕನಾಥ್ ಶಿಂಧೆ ಬಣ) ಮೈತ್ರಿಕೂಟ ಮತ್ತೊಮ್ಮೆ ಅಭೂತಪೂರ್ವ ಜಯಭೇರಿ ಬಾರಿಸಿದ್ದು ಇದು ಜನತೆ ಮತ್ತೊಮ್ಮೆ ಬಿಜೆಪಿಯ ಅಭಿವೃದ್ಧಿ ರಾಜಕಾರಣಕ್ಕೆ ಮನ್ನಣೆ ನೀಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಐತಿಹಾಸಿಕ ವಿಜಯದ ರೂವಾರಿಗಳಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಮತ್ತು ಮಹಾರಾಷ್ಟ್ರದ ಎಲ್ಲ ಬಿಜೆಪಿ ಕಾರ್ಯಕರ್ತರಿಗೆ ಹೃತ್ಪೂರ್ವಕ ಅಭಿನಂದನೆಗಳು ಅಶೋಕ್ ತಿಳಿಸಿದ್ದಾರೆ.

ಮುಂಬೈ ಮಹಾನಗರದ ಜನತೆ ಬಿಜೆಪಿಗೆ ಬೆಂಬಲಿಸಿದಂತೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿಯೂ ಸಹ ಬೆಂಗಳೂರಿನ ಮಹಾ ಜನತೆ ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಆಶೀರ್ವಾದ ಮಾಡಲಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್‌ಪಕ್ಷದ ಪತನದ ಹಾದಿ ಆರಂಭವಾಗುವುದು ನಿಶ್ಚಿತ ಎಂದು ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ