Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನ ಸಾಮಾನ್ಯರ ಹಾಗೂ ರೈತರ ಪಕ್ಷ ಜನತಾದಳ-ನಿಖಿಲ್

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ನಾಗವಲ್ಲಿ ಗ್ರಾಮದ ಗ್ರಾಮ ಪಂಚಾಯತಿ ಆವರಣದ ಮುಂಭಾಗದಲ್ಲಿ ಜರುಗಿದ ಜನರೊಂದಿಗೆ ಜನತಾದಳ ಹಾಗೂ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಉದ್ಘಾಟಿಸಿ
, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಜನತಾದಳಪಕ್ಷ ಇದು ಜನಸಾಮಾನ್ಯರ ಹಾಗೂ ರೈತರ ಪಕ್ಷ ಪಕ್ಷದ ಏಳಿಗಾಗಿ ಹಗಲಿರುಳು ಶ್ರಮಿಸಿ, ಪಕ್ಷದ ಬೆಳ್ಳಿಹಬ್ಬಕ್ಕೆ ಕಾರಣೀಭೂತರಾದ ಸರ್ವರಿಗೂ ಧನ್ಯವಾದಗಳನ್ನು ಅವರು ಅರ್ಪಿಸಿದರು.
ತುಮಕೂರು ಜಿಲ್ಲೆಯಲ್ಲಿ ಪಕ್ಷದ ಹಳೆಯ ಗತವೈಭವವನ್ನು ಮರುಕಳಿಸಲು ನಾವೆಲ್ಲರೂ ಸಂಘಟಿತರಾಗಿ ಪಕ್ಷದ ಬಲವರ್ಧನೆಗೆ ಶ್ರಮಿಸಲು ಸಂಕಲ್ಪ ಮಾಡಲಾಯಿತು.




ಅನ್ನ ನೀಡುವ ರೈತನನ್ನೇ ಕಾಪಾಡದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದ್ದು ಏನು ಪ್ರಯೋಜನ? ರಾಜ್ಯದಲ್ಲಿ 2800ಕ್ಕೂ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದ್ರಲ್ಲಿ ತುಮಕೂರಲ್ಲಿ 40ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೊಂದು ರೈತ ವಿರೋಧಿ ಸರ್ಕಾರ ಎಂದು ನಿಖಿಲ್ ವಾಗ್ದಾಳಿ ಮಾಡಿದರು.

ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಸಾಧನೆ ಹಾಗೂ ಕೊಡುಗೆಯನ್ನು ತುಮಕೂರು ಗ್ರಾಮಾಂತರ ಜನತೆಗೆ ತಿಳಿಸಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತ ಬಂಧುಗಳ ಗೆಲುವಿಗಾಗಿ ಶ್ರಮಿಸೋಣ ಆ ಮೂಲಕ 2028 ರ ಚುನಾವಣೆಗೆ ಶ್ರಮಿಸೋಣ ಎಂದು ನಿಖಿಲ್ ಕರೆ ನೀಡಿದರು.

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ, ರೈತರ ಆತ್ಮಹತ್ಯೆ ಸೇರಿದಂತೆ ವಿವಿಧ ವಿಷಯಗಳ ಕುರಿತು ತಿಳಿಸಿದ ಅವರು, ಶಿಕ್ಷಕರ ನೇಮಕಾತಿ ಆಗದಿರುವುದರ ಬಗ್ಗೆ ಮಾತನಾಡಿ, ಮುಂಬರುವ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಪಕ್ಷದ ಬೃಹತ್ ಸಮಾವೇಶ ಮಾಡುವ ಮೂಲಕ 2028 ರ ಚುನಾವಣೆಗೆ ದಿಕ್ಸೂಚಿ ಆಗವಂತೆ ಕಾರ್ಯಕ್ರಮ ಮಾಡೋಣ ಎಂದು ಕಾರ್ಯಕರ್ತರನ್ನು ಹುರುದುಂಬಿಸಿದರು‌.

ಈ ಸಂದರ್ಭದಲ್ಲಿ ಪಕ್ಷದ ಹಿರಿಯರು ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಜಿಲ್ಲಾಧ್ಯಕ್ಷ ನಿಂಗಪ್ಪ, ಮಾಜಿ ಶಾಸಕ ತಿಮ್ಮರಾಯಪ್ಪ, ಮುಖಂಡರಾದ ಕೆ.ಟಿ. ಶಾಂತಕುಮಾರ್, ಗುಬ್ಬಿ ನಾಗರಾಜು, ಶಿರಾ ಉಗ್ರೇಶ್, ತಾಲ್ಲೂಕು ಅಧ್ಯಕ್ಷ ರಾಮಣ್ಣ, ಮಾಜಿ ಜಿಲ್ಲಾಧ್ಯಕ್ಷ ಆರ್.ಸಿ. ಅಂಜಿನಪ್ಪ, ಮುಖಂಡರಾದ ಡಿ. ರವಿ ನಾಗರಾಜಯ್ಯ, ಮಾಜಿ ವಿಧಾನಪರಿಷತ್ ಸದಸ್ಯ ತೂಪಲ್ಲಿ ಚೌಡರೆಡ್ಡಿ, ಮಾಜಿ ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತ ಬಂಧುಗಳು ಹಾಗೂ ತುಮಕೂರು ಗ್ರಾಮಾಂತರದ ಮಹಾಜನತೆ ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ