LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರಿಂದ ಮನವಿ ಸಲ್ಲಿಕೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧೀಕ್ಷಕರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಜು.೧೦ ಸ್ಕೀಮ್ ನೌಕರರ ಕರಾಳ ದಿನಾಚರಣೆ ಪ್ರಯುಕ್ತ ಒಂದು ದಿನದ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮನವಿ ಅರ್ಪಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ

ಎಲ್‌ಕೆಜಿ. ಯುಕೆಜಿ. ವಿಸ್ತರಣೆಯಾಗಬೇಕು. ೨೦೨೬ ರ ಮಾ-೨೪ ರ ಸಭೆಯ ತೀರ್ಮಾನದಂತೆ ಹತ್ತು ಸಾವಿರ ಕೇಂದ್ರಗಳಲ್ಲಿ ಎಲ್‌ಕೆಜಿ. ಯುಕೆಜಿ. ಆರಂಭಿಸಲು ಅನುದಾನ ನೀಡಬೇಕು. ಮೂರರಿಂದ ಆರು ವರ್ಷದ ಮಕ್ಕಳಿಗೆ ಆರಂಭಿಕ ಬಾಲ್ಯ ಆರೈಕೆ, ಶಿಕ್ಷಣ ಮತ್ತು ಅಭಿವೃದ್ದಿ ಹಕ್ಕನ್ನು ಕಾನೂನಿನ ಮೂಲಕ ಖಾತ್ರಿಗೊಳಿಸಿ ೨೦೧೧ ರಿಂದ ನಿವೃತ್ತಿಯಾದವರಿಗೆ ಗ್ರಾಚ್ಯುಟಿ ನೀಡಬೇಕು. ಮೂರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಎಲ್ಲಾ ಅಂಗನವಾಡಿಗಳನ್ನು ಅಂಗನವಾಡಿ ಕಮ್-ಶಿಶುಪಾಲನಾ ಕೇಂದ್ರಗಳಾಗಿ ಪರಿವರ್ತಿಸಬೇಕು.

ಅಂಗನವಾಡಿ ನೌಕರರನ್ನು ಬಿಎಲ್‌ಓ. ಎಸ್‌ಐಆರ್. ಇತರೆ ಸಮೀಕ್ಷಾ ಕೆಲಸಗಳಿಂದ ಮುಕ್ತಗೊಳಿಸಬೇಕು. ಐವತ್ತು ವರ್ಷ ಮೇಲ್ಪಟ್ಟವರನ್ನು ಸಹಾಯಕಿ ಇಲ್ಲದಿದ್ದರೆ ಎಲ್‌ಕೆಜಿ. ಯುಕೆಜಿ.ಗೆ ಆಯ್ಕೆಯಾದ, ತೀವ್ರ ಕಾಯಿಲೆ ಇರುವವರನ್ನು ಬಿಎಲ್‌ಓ. ದಿಂದ ಬಿಡುಗಡೆಗೊಳಿಸಿ ಇಲಾಖೇತರ ಬೇರೆ ಕೆಲಸಗಳಿಗೆ ನೇಮಿಸಬಾರದೆಂದು ಒತ್ತಾಯಿಸಿದರು.

ಸಿಐಟಿಯು. ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್‌ಪೀರ್, ಇಂದಿರಮ್ಮ, ಬಿ.ಬೋರಮ್ಮ, ಅನುಸೂಯಮ್ಮ, ನಿರ್ಮಲಮ್ಮ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಪಟ್ಟು, ಪರಿಷತ್‌ನಲ್ಲಿ, ಬಳ್ಳಾರಿಯಲ್ಲಿ ಅಹೋರಾತ್ರಿ ಧರಣಿ!ಪ್ರಿಯಕರನ ಜೊತೆ ಸೇರಿ ಪುತ್ರ, ಪತಿಯನ್ನೇ ಕೊಂದ ಪತ್ನಿ ಬಂಧನ!"ನೀವು ವೇದಾಂತಿ ಆಗಿ, ಸಿಎಂ ಸ್ಥಾನ ಸೆಟ್ ಆಗ್ತಿಲ್ಲ": ಡಿಕೆಶಿಗೆ ಸುನೀಲ್ ಕುಮಾರ್ ಸಲಹೆ, ಸದನದಲ್ಲಿ ನಗೆಯ ಅಲೆ!ಕಾಂಗ್ರೆಸ್‌ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್KPSC ನೇಮಕಾತಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ, ಕಚೇರಿ ಸೇರಿ 21 ಕಡೆ ಇಡಿ ದಾಳಿ‘ನಮ್ಮ ರಾಜ್ಯ ರಕ್ಷಣೆ ನಮಗೆ ಗೊತ್ತು, ಹಸ್ತಕ್ಷೇಪ ಬೇಡ’: ತಮಿಳುನಾಡು ನಾಯಕರಿಗೆ ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆವಿದ್ಯಾರ್ಥಿ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ: ಉನ್ನತಾಧಿಕಾರ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ನಿರ್ಧಾರ‘ವಂದೇ ಮಾತರಂ’ ವಿವಾದ: ಸೋನಿಯಾ-ರಾಹುಲ್ ವಿರುದ್ಧ ದೂರು, ಖರ್ಗೆ ವಾಗ್ದಾಳಿKPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ವಜಾ: ಮರುನೇಮಕಕ್ಕೆ ಹೈಕೋರ್ಟ್ ನಿರ್ದೇಶನ ‘ಫ್ರೀಡಂ ಪಾರ್ಕ್‌ನಲ್ಲಿ ಬಹಿರಂಗ ಚರ್ಚೆಗೆ ಬನ್ನಿ’: ಕಾಂಗ್ರೆಸ್‌ನಾಯಕರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಸವಾಲು!