Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿ.ವಿ.ಸಾಗರದ ಜಲಸಾಹಸ ಕ್ರೀಡೆಯಲ್ಲಿ ಭಾಗವಹಿಸಿದ್ದ ಪಿ.ಜಿ.ಆರ್ ಸಿಂಧ್ಯಾ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಾನಸಿಕ ಮತ್ತು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಜಲ ಸಾಹಸ ಕ್ರೀಡೆ ತುಂಬಾ ಸಹಕಾರಿ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.


ಜನರಲ್ ತಿಮ್ಮಯ್ಯ ಸಾಹಸ ಅಕಾಡಮಿ ಮತ್ತು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದೊಂದಿಗೆ ಹಿರಿಯೂರಿನ ವಾಣಿವಿಲಾಸಸಾಗರದಲ್ಲಿ ರೋವರ್ಸ್ ಮತ್ತು ರೇಂಜರ್ಸ್‌ಗಳಿಗೆ ಏರ್ಪಡಿಸಲಾಗಿದ್ದ ಜಲ ಸಾಹಸ ಕ್ರೀಡಾ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಪ್ರಕೃತಿ ಸೌಂದರ್ಯವನ್ನು ಅನುಭವಿಸುತ್ತ ಧೈರ್ಯ, ಆತ್ಮವಿಶ್ವಾಸವನ್ನು ವಿದ್ಯಾರ್ಥಿಗಳು ಹೆಚ್ಚಿಸಿಕೊಳ್ಳಬೇಕು. ನೀರು ಕೇವಲ ಜೀವನದ ಮೂಲಾಧಾರವಲ್ಲ. ಅದು ಒಂದು ಬಗೆಯ ಸಾಹಸ ಮತ್ತು ಉತ್ಸಾಹ. ಯುವ ಜನಾಂಗದಲ್ಲಿ ಅತ್ಯಂತ ಜನಪ್ರಿಯತೆ ಗಳಿಸುತ್ತಿರುವ ಜಲಸಾಹಸ ಕ್ರೀಡೆ ಇಂದಿನ ದಿನಗಳಲ್ಲಿ ಅತ್ಯಗತ್ಯವಾದುದು ಎಂದರು.



ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತರಾದ ಡಿ.ಡಿ.ಪಿ.ಐ. ಮಂಜುನಾಥ್ ಮಾತನಾಡಿ ವಿದ್ಯಾರ್ಥಿಗಳು ಜಲಸಾಹಸದಲ್ಲಿ ತೊಡಗುವಾಗ ಸುರಕ್ಷತೆ ಕಡೆ ಹೆಚ್ಚಿನ ಗಮನ ಕೊಡಬೇಕು. ಶಾಲೆಯ ಪಠ್ಯಗಳಲ್ಲಿ ಸಿಗದಂತ ಅನುಭವ ಪಠ್ಯೇತರ ಚಟುವಟಿಕೆಗಳಲ್ಲಿ ದೊರಕುತ್ತದೆ. ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲರೂ ನೀಟ್ ಪರೀಕ್ಷೆಗೆ ಓದುತ್ತಾರೆ. ಆದರೆ ನೀಟಾಗಿ ಬದುಕುವ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಯುವ ಪೀಳಿಗೆಗೆ ಇಂತಹ ಕ್ರೀಡೆಗಳು ಅತಿ ಮುಖ್ಯ ಎಂದರು.

ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಬಿ.ಎ.ಲಿಂಗಾರೆಡ್ಡಿ ಮಾತನಾಡುತ್ತ ಪ್ರತಿಯೊಬ್ಬರು ಧೈರ್ಯವನ್ನು ಹೆಚ್ಚಿಸಿಕೊಂಡಾಗ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು. ಈಜು ತಜ್ಞರ ಮಾರ್ಗದರ್ಶನದಲ್ಲಿ ಜಲ ಸಾಹಸ ಕ್ರೀಡೆಯ ತರಬೇತಿ ಪಡೆದಾಗ ಅತ್ಯುತ್ತಮ ಅನುಭವವಾಗುತ್ತದೆ. ಜಿಲ್ಲೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಲ ಸಾಹಸ ಕ್ರೀಡಾ ತರಬೇತಿಯಲ್ಲಿ ಪಾಲ್ಗೊಳ್ಳಬೇಕೆಂದರು.

ಹಿರಿಯೂರು ಕ್ಷೇತ್ರ ಶಿಕ್ಷಣಾಧಿಕಾರಿ ಮಹಮದ್ ಮೊಹಸಿನ್, ದೀಪಿಕ, ಯೋಗರಾಜ್, ಪಿ.ವೈ.ದೇವರಾಜ್‌ಪ್ರಸಾದ್, ಕೆ.ಬಿ.ಮಲ್ಲೇಶಪ್ಪ ಮತ್ತಿತರರು ಜಲ ಸಾಹಸ ಕ್ರೀಡೆಯಲ್ಲಿ ಪಾಲ್ಗೊಂಡಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ