Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮಾನ್ಯರು, ಜವಾಬ್ದಾರಿಯುತ ನಾಗರಿಕರ ಮೇಲೆ ಪೊಲೀಸರ ದಬ್ಬಾಳಿಕೆ, ದೈಹಿಕ ಹಲ್ಲೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸಿ ದೈಹಿಕ ಹಲ್ಲೆಗೂ ಮುಂದಾಗುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ಮಾಡಿದ್ದಾರೆ.

ಚಿತ್ರದುರ್ಗದಲ್ಲಿ ನಮ್ಮ ಪಕ್ಷದ ಮಧುಗಿರಿ (ಸಂಘಟನಾತ್ಮಕ ಜಿಲ್ಲೆ)  ಜಿಲ್ಲಾಧ್ಯಕ್ಷರಾದ ಹನುಮಂತೇಗೌಡ ಅವರ ಮೇಲೆ ಪಿಎಸ್​ಐ ಗಾದಿಲಿಂಗ ಗೌಡರ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ್ದು ಇದನ್ನು ಕರ್ನಾಟಕ ಬಿಜೆಪಿ  ಅತ್ಯುಗ್ರವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ನಾಗರಿಕ ಸಮಾಜದಲ್ಲಿ ಶಾಂತಿ ಸಂರಕ್ಷಿಸಲಾಗದ ಅಧಿಕಾರಿಗಳು ಮಧ್ಯ ರಾತ್ರಿಯಲ್ಲಿ ತಮ್ಮ ಪೊಲೀಸ್ ರೌದ್ರಾವತಾರ ಪ್ರದರ್ಶಿಸಲು ಹೊರಟಿದ್ದಾರೆ. ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸುವ ಮುನ್ನ ಅವರ ಸಾಮಾಜಿಕ ಸ್ಥಾನಮಾನವನ್ನೂ ಲೆಕ್ಕಿಸದೆ ಗೂಂಡಾಗಿರಿ ಪ್ರದರ್ಶಿಸುವುದು ಪೊಲೀಸ್ ಇಲಾಖೆಯ ದಕ್ಷತೆಯ ಘನತೆಯನ್ನು ಕಳೆದಂತೆ ಎಂದು ವಿಜಯೇಂದ್ರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪ್ರಭಾವಿಗಳಿಂದ ಆಯಾ ಕಟ್ಟಿನ ಸ್ಥಾನದಲ್ಲಿ ಕುಳಿತುಕೊಂಡಿರುವ ಕೆಲವು ಪೊಲೀಸ್ ಅಧಿಕಾರಿಗಳು ತಮಗೆ ಯಾರೂ ಏನೂ ಮಾಡಲಾಗದು ಎಂಬ ಮನಸ್ಥಿತಿಯನ್ನು ಮೈಗೂಡಿಸಿಕೊಂಡಿದ್ದು ಎಲ್ಲೆಂದರಲ್ಲಿ ತಮ್ಮ ದರ್ಪ ಪ್ರದರ್ಶಿಸುತ್ತಿದ್ದಾರೆ.


ಚಿತ್ರದುರ್ಗದ ಘಟನೆಯ ಹಿಂದೆ ರಾಜಕಾರಣದ ಪ್ರಚೋದನೆ ಇರುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು, ಅಧಿಕಾರಸ್ತ ರಾಜಕಾರಣಿಗಳ ಕೈಗೊಂಬೆಯಂತೆ ವರ್ತಿಸುತ್ತಿರುವ ಪೊಲೀಸರು ಇಲಾಖೆಯ ಗೌರವ ಕಳೆಯುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಚಿತ್ರದುರ್ಗದ ಪಿಎಸ್ಐ ಗಾದಿಲಿಂಗ ಗೌಡರ ಅವರನ್ನು ಈ ಕೂಡಲೇ ಪೊಲೀಸ್ ಮಹಾನಿರ್ದೇಶಕರು ಅಮಾನತ್ತಿನಲ್ಲಿಡದಿದ್ದರೆ ಬಿಜೆಪಿಯು ನಾಗರಿಕರೊಡಗೂಡಿ ಹೋರಾಟ ನಡೆಸುವುದು ಅನಿವಾರ್ಯವಾದೀತು ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ